ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ “ಇಂದ್ರ ಕಲಾ ವೈಭವ”

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಪ್ರತಿಭಾನ್ವೇಷಣೆ ಕಾರ್ಯಕ್ರಮ “ಇಂದ್ರ ಕಲಾ ವೈಭವ” ಜುಲೈ 16ರಂದು ಜರಗಿತು.


ಇಂದ್ರಪ್ರಸ್ಥ ಸಂಸ್ಥೆಗಳ ಸಂಚಾಲಕ ಯು.ಜಿ. ರಾಧ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಪ್ರೌಢ ಶಾಲಾ ಹಂತದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಥಮ ಪಿಯುಸಿ. ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಕರುಣಾಕರ ಸುವರ್ಣ, ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯ ಶಿಕ್ಷಕಿ  ವೀಣಾ ಪ್ರಸಾದ್ ಹಾಗೂ ಪ್ರಾಂಶುಪಾಲರಾದ ಹೆಚ್.ಕೆ. ಪ್ರಕಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವಿವಿಧ ಕಲಾ ಪ್ರದರ್ಶನವನ್ನು ಪ್ರಸ್ತುತ ಪಡಿಸಿದರು. ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here