ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಹಾರ್ದಿಕ್ ನಾಯ್ಕ್ 2 ಚಿನ್ನದ ಪದಕ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇದರ ಸಹಯೋಗದೊಂದಿಗೆ ಜು.15 ರಂದು ಪರ್ಲಡ್ಕ ಡಾ| ಶಿವರಾಮ ಕಾರಂತ ಈಜು ಕೊಳದಲ್ಲಿ ನಡೆದ ಪ್ರಾಥಮಿಕ/ಪ್ರೌಢ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ನೆಹರೂನಗರ ಸುದಾನ ರೆಸಿಡೆನ್ಸಿಯಲ್ ಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿ ಹಾರ್ದಿಕ್ ನಾಯ್ಕ್ರ ವರು 2 ಚಿನ್ನದ ಪದಕ ಪಡೆದಿದ್ದಾರೆ. ಇವರು ಪರ್ಲಡ್ಕ ಸತೀಶ್ ನಾಯ್ಕ್  ಮತ್ತು ನೈನಾ  ನಾಯ್ಕ್ ರವರ ಪುತ್ರ.

LEAVE A REPLY

Please enter your comment!
Please enter your name here