ಕೆಮ್ಮಾರ: ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಪಂದ್ಯಾಟ

0

 

ಕೆಮ್ಮಾರ: ಉಪ್ಪಿನಂಗಡಿ ವಲಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಪಂದ್ಯಾಟವು ಕೆಮ್ಮಾರ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಜು.14ರಂದು ಜರಗಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಝೀಝ್ ಬಿ.ಕೆ.,ರವರು ಸಭೆಯ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಹಿರೇಬಂಡಾಡಿ ಗ್ರಾ.ಪಂ.ಸದಸ್ಯೆ ವಾರಿಜ ಉದ್ಘಾಟಿಸಿದರು. ಉಪ್ಪಿನಂಗಡಿ ವಲಯ ಶಿಕ್ಷಣ ಸಂಯೋಜಕ ಹರಿಪ್ರಸಾದ್, ಬಜತ್ತೂರು ಕ್ಲಸ್ಟರ್ ಸಿಆರ್‌ಪಿ ಮಂಜುನಾಥ್ ಕೆ.ವಿ., ಎಸ್‌ಡಿಎಂಸಿ ಜಿಲ್ಲಾ ಸಮಿತಿ ಕಾಯದರ್ಶಿ ಸೆಲಿಕತ್, ಕೆಮ್ಮಾರ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನದಾಸ್ ಶೆಟ್ಟಿ, ಹಿರೇಬಂಡಾಡಿ ಗ್ರಾ.ಪಂ.ಸದಸ್ಯ ಹೇಮಂತ್, ಹೊಸಮಜಲು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಆನಂದ ಗೌಡ, ನೆಲ್ಯಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಗೌಡ, ಎಸ್‌ಡಿಎಂಸಿ ಉಪಾಧ್ಯಕ್ಷೆ ಸುಮಯ್ಯ, ಶಾಲಾ ಮುಖ್ಯಶಿಕ್ಷಕಿ ಜಯಶ್ರೀ ಎಂ., ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಎಸ್‌ಡಿಎಂಸಿ ಸದಸ್ಯರು, ಪೋಷಕರು, ಊರವರು ಕಾರ್ಯಕ್ರಮಕ್ಕೆ ಸಹಕರಿಸಿದರು. ಸುಮನಾ ಕೆ.ಎಸ್. ನಿರೂಪಿಸಿದರು. ಅತಿಥಿ ಶಿಕ್ಷಕಿ ಮೆಹನಾಜ್‌ಭಾನು ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ವಂದಿಸಿದರು. ಬಾಲಕರ ವಿಭಾಗದಲ್ಲಿ ಹೊಸಮಜಲು ಶಾಲೆ ಪ್ರಥಮ ಸ್ಥಾನವನ್ನು ಹಾಗೂ ಕೆಮ್ಮಾರ ಶಾಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಉಪ್ಪಿನಂಗಡಿ ಸೈಂಟ್ ಮೇರಿಸ್ ಶಾಲೆ ಹಾಗೂ ಉಪ್ಪಿನಂಗಡಿ ಸಂತ ಫಿಲೋಮಿನಾ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿತು.

 

LEAVE A REPLY

Please enter your comment!
Please enter your name here