ಕೋಡಿಂಬಾಡಿ ಬಿಜೆಪಿ ಶಕ್ತಿಕೇಂದ್ರದಿಂದ ಡಾ.ಎಂ.ಕೆ.ಪ್ರಸಾದ್ ಗೆ ಅಭಿನಂದನೆ

0

ಪುತ್ತೂರು: ಪ್ರತಿಷ್ಠಿತ ಡಾಕ್ಟರ್ಸ್ ಡೇ ಪ್ರಶಸ್ತಿ ಪುರಸ್ಕೃತರಾಗಿರುವ ಹಿರಿಯ ವೈದ್ಯ ಡಾ. ಎಂ.ಕೆ.ಪ್ರಸಾದ್ ಅವರನ್ನು ಕೋಡಿಂಬಾಡಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.

ಡಾ.ಎಂ.ಕೆ.ಪ್ರಸಾದ್ ಅವರ ಪುತ್ತೂರಿನ ಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಾ. ಎಂ.ಕೆ.ಪ್ರಸಾದ್ ಅವರ ಪತ್ನಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರಿಗೂ ಗೌರವಾರ್ಪಣೆ ಸಲ್ಲಿಸಲಾಯಿತು.

ಜಿ.ಪಂ.ಮಾಜಿ ಸದಸ್ಯೆ ಶಯನಾ ಜಯಾನಂದ, ತಾ.ಪಂ.ಮಾಜಿ ಅಧ್ಯಕ್ಷ ಕೆ.ಜಯಾನಂದ, ತಾ.ಪಂ.ಮಾಜಿ ಸದಸ್ಯ ಲಕ್ಷ್ಮಣ ಗೌಡ ಕೆ, ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ರಾಮಚಂದ್ರ ಪೂಜಾರಿ ಶಾಂತಿನಗರ, ಸದಸ್ಯರಾದ ರಾಮಣ್ಣ ಗೌಡ ಗುಂಡೋಲೆ, ಮೋಹಿನಿ ಜನಾರ್ದನ ಗೌಡ ಕೋಡಿ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ಮೋಹನ ಪಕ್ಕಳ ಕುಂಡಾಪು, ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ರೇವತಿ ವೀರಪ್ಪ ಪೂಜಾರಿ ಡೆಕ್ಕಾಜೆ, ನಿರ್ದೇಶಕ ವೀರಪ್ಪ ಪೂಜಾರಿ ಡೆಕ್ಕಾಜೆ, ಮಾಜಿ ಉಪಾಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಪನಿಪಾಲು, ಪ್ರಮುಖರಾದ ಡಾ. ಶಿವಪ್ರಕಾಶ್ ಮೋನಡ್ಕ, ಭರತ್ ಗೌಡ ನಿಡ್ಯ, ಸಂದೀಪ್ ಕೆ. ಪೂಜಾರಿ ಶಾಂತಿನಗರ, ಚೆನ್ನಣ್ಣ ಗೌಡ ಬರಮೇಲು, ಜನಾರ್ದನ ಗೌಡ ಕೋಡಿ, ಸೇಸಪ್ಪ ಗೌಡ ಕಂಬಳದಡ್ಡ, ಗಿರೀಶ್ ಅಲಿಮೆ, ಮನೋಜ್ ಬೆಳ್ಳಿಪ್ಪಾಡಿ, ಕಿರಣ್ ಕುಮಾರ್ ಕೂಟೇಲು, ವಿಷ್ಣುಪ್ರಸಾದ್ ಬೆಳ್ಳಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here