ಪಾಣಾಜೆ ಸುಬೋಧ ಪ್ರೌಢಶಾಲಾ ವಿದ್ಯಾರ್ಥಿ ಕೌಶಲ್ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ತಾಲೂಕಿಗೆ ಪ್ರಥಮ

0

ನಿಡ್ಪಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಜು.18 ರಂದು ನಡೆದ  ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪಾಣಾಜೆ ಸುಬೋಧ ಪ್ರೌಢ  ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಕೌಶಲ್ ಹದಿನಾಲ್ಕರ ವಯೋಮಾನದ ಬಾಲಕರ ವಿಭಾಗದಲ್ಲಿ ತಾಲೂಕು ಮಟ್ಟದಲ್ಲಿ  ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ತಿಳಿಸಿದ್ದಾರೆ.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್.ಪಿ  ಇವರಿಗೆ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here