ಕಡಬಕ್ಕೆ ಲೋಕಾಯುಕ್ತ ಡಿವೈಎಸ್ಪಿ ಭೇಟಿ

0

ಸವಣೂರು ಕಂಚಿಕಾರ ಕೆರೆ ಒತ್ತುವರಿ ವಿಚಾರ- ಲೋಕಾಯುಕ್ತಕ್ಕೆ ದೂರು

ಕಡಬ: ಕಡಬ ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಜು.19ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದರು.
ಸವಣೂರು ಕಂಚಿಕಾರ ಕೆರೆಯನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಲಾಯಿತು. ಪ್ರಕರಣ ಕೋರ್ಟಿನಲ್ಲಿ ಇದ್ದರೂ ಅದನ್ನು ಒತ್ತುವರಿ ಮಾಡಿಕೊಂಡಿರುವ ಪ್ರಭಾವಿ ವ್ಯಕ್ತಿಗಳು ಅದರಲ್ಲಿ ಕೃಷಿ ಚಟುವಟಿಕೆ ಮಾಡುತ್ತಿರುವ ಬಗ್ಗೆ ಲೋಕಾಯುಕ್ತರಿಗೆ ತಿಳಿಸಿದಾಗ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಅವರಿಗೆ ಲೋಕಾಯುಕ್ತ ಪೋಲಿಸರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಚೆಲುವರಾಜ್, ಇನ್ಸ್‌ಪೆಕ್ಟರ್ ಅಮಾನುಲ್ಲ, ಲೋಕಾಯುಕ್ತಾ ಸಿಬ್ಬಂದಿಗಳಾದ ಸುರೇಂದ್ರ, ಗಾಯತ್ರಿ, ಶರತ್, ಪಂಪಣ್ಣ, ಕಡಬ ತಹಸೀಲ್ದಾರ್ ಅನಂತಶಂಕರ್ ಬಿ., ತಾ.ಪಂ. ಇ.ಒ. ನವೀನ್ ಕುಮಾರ್ ಭಂಡಾರಿ, ಉಪತಹಸೀಲ್ದಾರ್ ಮನೋಹರ್ ಕೆ.ಟಿ. ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ ಮೂಲ್ಯ, ತಾ.ಪಂ.ವ್ಯವಸ್ಥಾಪಕ ಆನಂದ ಗೌಡ, ಭೂಮಾಪಕ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here