ವಿವೇಕಾನಂದ ಕಾಲೇಜಿನಲ್ಲಿ ತರಂಗನ್-2022 ಅಂತರ್ ತರಗತಿ ಫೆಸ್ಟ್

0

ಶಿಕ್ಷಣ ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟ- ತುಳುಚಿತ್ರ ನಟ ವಿನೀತ್

ಪುತ್ತೂರು; ನಾವು ಮಾಡುವ ಯಾವುದೇ ಕೆಲಸವೂ ಪರರಿಗೆ ಇಷ್ಟವಾಗಿ ಅವರಿಗೆ ಖುಷಿಯನ್ನು ತಂದುಕೊಟ್ಟರೆ ಅದುವೇ ನಮ್ಮ ಜೀವನದ ನಿಜವಾದ ಸಾರ್ಥಕ್ಯ. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣವೆಂಬುದು ಬಹುಮುಖ್ಯ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣವನ್ನು ಕಡ್ಡಾಯವಾಗಿ ಪಡೆಯಲೇಬೇಕು. ಅಂತೆಯೇ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತುಳು ಸಿನಿಮಾ ನಿರ್ಮಾಪಕ ಹಾಗೂ ನಟ ವಿನೀತ್ ಕುಮಾರ್ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ ತರಂಗನ್-2022 ಅಂತರ್ ತರಗತಿ ಫೆಸ್ಟ್‌ನಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಮಾತನಾಡಿ ತುಳುನಾಡಿನ ಚಿತ್ರರಂಗದಲ್ಲಿ ನಾಯಕ ನಟನಾಗಿ ವಿನೀತ್ ಕುಮಾರ್ ಗುರುತಿಸಿಕೊಳ್ಳುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಇತ್ತೀಚೆಗಷ್ಟೇ ಮೂಡಿ ಬಂದಂತಹ ಇವರ ಸೌಂಡ್ಸ್ ಆಂಡ್ ಲೈಟ್ಸ್ ಚಿತ್ರ ಒಂದು ಕುಟುಂಬದ ಕುರಿತಾಗಿದ್ದು ಸಾಮಾಜಿಕವಾಗಿ ಹಲವಾರು ಒಳ್ಳೆಯ ಸಂದೇಶವನ್ನು ನೀಡುವಂತದಾಗಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಮಾತನಾಡಿ ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭೆಗಳಿಗೆ ಸೂಕ್ತವಾದ ವೇದಿಕೆಯನ್ನು ಕಲ್ಪಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದರೆ ಮುಂದಿನ ಜೀವನ ಸುಲಭ ಎಂದು ಹೇಳಿದರು.

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಅಶ್ವಿನಿ, ಸಾಕ್ಷಿ ಕಾರ್ಯಕ್ರಮದ ಅನುಭವ ಹಂಚಿಕೊಂಡರು. ಅಂತರ್ ತರಗತಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಬಿಕಾಂ ತಂಡ ಪ್ರಥಮ ಬಹುಮಾನವನ್ನು ಪಡೆದುಕೊಂಡಿತು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ, ವಿದ್ಯಾರ್ಥಿ ಸಂಯೋಜಕ ಪುಶನ್ ಪ್ರಸಾದ್, ಆಕಾಂಕ್ಷ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆಕಾಂಕ್ಷ ಸ್ವಾಗತಿಸಿ ಪುಶನ್ ಪ್ರಸಾದ್ ವಂದಿಸಿದರು, ವಿದ್ಯಾರ್ಥಿನಿ ಸೌಮ್ಯ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಪುನೀತ್ ಹಾಗೂ ಉಪನ್ಯಾಸಕಿ ಜ್ಯೋತಿ ಎಂ.ಎಂ ಸಹಕರಿಸಿದರು.

LEAVE A REPLY

Please enter your comment!
Please enter your name here