ನಿಡ್ಪಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪುತ್ತೂರು ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಜು.18 ರಂದು ನಡೆದ ತಾಲೂಕು ಮಟ್ಟದ ಹದಿನಾಲ್ಕರ ವಯೋಮಾನದ ಬಾಲಕಿಯರ ಟೇಬಲ್ ಟೆನಿಸ್ ವಿಭಾಗದಲ್ಲಿ ಪಾಣಾಜೆ ಸುಬೋಧ ಪ್ರೌಢ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ನಫೀಸತ್ ಮಶ್ರೂಫ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಸುಬೋಧ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ .ಪಿ ತರಬೇತಿ ನೀಡಿದ್ದರು.