ಸರಸ್ವತಿ ಮಹಿಳಾ ಮಂಡಳಿ, ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

0

 

ಪುತ್ತೂರು: ಪುತ್ತೂರು ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸರಸ್ವತಿ ಮಹಿಳಾ ಮಂಡಳಿ ವತಿಯಿಂದ ಮೋಂತಿಮಾರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸರಸ್ವತಿ ಮಹಿಳಾ ಮಂಡಳಿ ಮತ್ತು ಸ್ವ ಸಮಾಜದ ಸ್ಥಳೀಯ ಪ್ರತಿಭೆಗಳಿಂದ ಸಮಾಜದ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ಬಿ.ಆರ್ ಶುಭಕರ ರಾವ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪುಂಡಿಕಾಯಿ ಮಾತನಾಡಿ ಶತಮಾನೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲರ ಸಹಕಾರ ಮತ್ತು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುವುದು ಅಗತ್ಯ ಎಂದು ಹೇಳಿದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಸತೀಶ್ಚಂದ್ರ ಎಸ್.ಆರ್, ಮಹಿಳಾ ಮಂಡಳಿಯ ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಡಾ.ವಾರಿಜ ನಿರ್ಬೈಲು ಕಾರ್ಯಕ್ರಮ ಸಂಯೋಜಿಸಿದ್ದರು. ರಕ್ಷಾ ಮನೆವಾರ್ತೆ ಸಹಕರಿಸಿದ್ದರು.

LEAVE A REPLY

Please enter your comment!
Please enter your name here