ಡಾ.ಎಂ.ಕೆ. ಪ್ರಸಾದ್‌ರವರಿಗೆ ಬಂಟರ ಸಂಘದಿಂದ ಸನ್ಮಾನ

0

ಪುತ್ತೂರು: ಪ್ರತಿಷ್ಠಿತ ಐಎಂಎ- ಕೆಎಸ್‌ಬಿ ಡಾಕ್ಟರ್ಸ್ ಡೇ ಪ್ರಶಸ್ತಿಗೆ ಭಾಜನರಾದ ಜನಪ್ರಿಯ ವೈದ್ಯ ಡಾ.ಎಂ.ಕೆ.ಪ್ರಸಾದ್‌ರವರನ್ನು ಪುತ್ತೂರು ತಾಲೂಕು ಬಂಟರ ಸಂಘದಿಂದ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಡಾ. ಪ್ರಸಾದ್‌ರವರು ಮಾತನಾಡಿ, ಬಂಟರ ಸಂಘವು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳುತ್ತಿದೆ. ಸಂಘದಿಂದ ಮಾಡಿದ ಸನ್ಮಾನ ಅತ್ಯಂತ ಸಂತಸ ತಂದಿದ್ದು, ಇನ್ನಷ್ಟು ಹುರುಪು ನೀಡಿದೆ ಎಂದರಲ್ಲದೆ ಸಂಘದ ಮುಖಾಂತರ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಸಹಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲು, ತಾಲೂಕು ಬಂಟರ ಸಂಘದ ಕೋಶಾಽಕಾರಿ ಕೃಷ್ಣಪ್ರಸಾದ್ ಆಳ್ವ ಉಪ್ಪಳಿಗೆ, ಉಪಾಧ್ಯಕ್ಷ ಚಿಲ್ಮೆತ್ತಾರು ಜಗಜೀವನ್‌ದಾಸ್ ರೈ, ನಿರ್ದೇಶಕರುಗಳಾದ ಕರುಣಾಕರ ರೈ ದೇರ್ಲ, ನಿತ್ಯಾನಂದ ಶೆಟ್ಟಿ ಮನವಳಿಕೆಗುತ್ತು, ಎಂ.ಆರ್. ಜಯ ಕುಮಾರ್ ರೈ ಮಿತ್ರಂಪಾಡಿ, ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here