ಏಕಬಳಕೆ ಪ್ಲಾಸ್ಟಿಕ್ ನಿಷೇಧ-ವಿಟ್ಲ ಪೇಟೆಯಲ್ಲಿ ಪಟ್ಟಣ ಪಂಚಾಯತ್ ಅಧಿಕಾರಿಗಳಿಂದ ಮಾಹಿತಿ

0

ಪುತ್ತೂರು: ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನೆಲೆಯಲ್ಲಿ ವಿಟ್ಲಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಗೋಪಾಲ ನಾಯ್ಕ್ ರವರು ಜು.19ರಂದು ವಿಟ್ಲ ಸಂತೆ ಮಾರುಕಟ್ಟೆ ಹಾಗೂ ವಿಟ್ಲ ಪೇಟೆಯಲ್ಲಿನ ಅಂಗಡಿಗಳಿಗೆ ತೆರಳಿ ನೋಟೀಸು ನೀಡಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಾಹಿತಿ ನೀಡಿದರು.

ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಈಗಾಗಲೇ ವರ್ತಕರಿಗೆ ನೋಟೀಸು ನೀಡುವ ಮೂಲಕ, ಮೈಕ್ ಅನೌನ್ಸ್ ಮೂಲಕ ಎಚ್ಚರಿಕೆ ನೀಡುವ ಕೆಲಸವನ್ನು ಮಾಡಲಾಗಿದೆ. ಇದೀಗ ನಾನು ಖುದ್ದು ಸಂತೆ ಮಾರುಕಟ್ಟೆ ಸಹಿತ ಪೇಟೆಯ ಹೆಚ್ಚಿನ ಅಂಗಡಿಗಳಿಗೆ ತೆರಳಿ ಕರಪತ್ರ ನೀಡಿ ಪ್ಲಾಸ್ಟಿಕ್ ನಿಷೇಧಿಸುವಂತೆ ತಿಳಿಸಿದ್ದೇನೆ. ಮುಂದಿನ ದಿನಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ವಿಟ್ಲಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಗೋಪಾಲ ನಾಯ್ಕ್ ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here