ಡಾ|ವೀರೇಂದ್ರ ಹೆಗ್ಗಡೆಯವರಿಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು:ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮೀಣಾಭಿವೃದ್ಧಿಯ ಹರಿಕಾರ ಪದ್ಮವಿಭೂಷಣ ರಾಜರ್ಷಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರು ಜು.21ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಧಾರ್ಮಿಕ,ಸಾಮಾಜಿಕ,ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಡಾ|ಹೆಗ್ಗಡೆಯವರು ನೀಡಿರುವ ಅಪಾರ ಕೊಡುಗೆಯನ್ನು ಪುರಸ್ಕರಿಸಿ ಕೇಂದ್ರ ಸರಕಾರವು ಅವರನ್ನು ಕರ್ನಾಟಕದಿಂದ ರಾಜ್ಯ ಸಭೆಗೆ ನಾಮನಿರ್ದೇಶನ ಮಾಡುವ ಮೂಲಕ ಅವರ ಸಮಾಜಮುಖಿ ಕೆಲಸಗಳಿಗೆ ಬಹುದೊಡ್ಡ ಗೌರವ ನೀಡಿದೆ.ರಾಜ್ಯ ಸಭಾ ಸದಸ್ಯರಾಗಿ ಡಾ|ವೀರೇಂದ್ರ ಹೆಗ್ಗಡೆಯವರು ಜು.21ರಂದು ದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ದೆಹಲಿಯಲ್ಲಿ ಡಾ|ಹೆಗ್ಗಡೆಯವರಿಗೆ ಸ್ವಾಗತ:
ಜು.21ರಂದು ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಡಾ|ವೀರೇಂದ್ರ ಹೆಗ್ಗಡೆಯವರು ಜು.20ರಂದು ರಾತ್ರಿ ದೆಹಲಿಗೆ ತೆರಳಿದ್ದಾರೆ.ದೆಹಲಿ ವಿಮಾನ ನಿಲ್ದಾಣದಲ್ಲಿ ಡಾ|ಹೆಗ್ಗಡೆಯವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.ದಿಲ್ಲಿ ಕನ್ನಡ ವಿದ್ಯಾ ಸಂಸ್ಥೆಯ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಅವರು ಡಾ|ಹೆಗ್ಗಡೆಯವರಿಗೆ ಶಾಲು ಹಾಕಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಸಂಸದರಾದ ತೇಜಸ್ವಿಸೂರ್ಯ, ನಾರಾಯಣ ಸ್ವಾಮಿ ಮತ್ತಿತರ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.