ಕಂಜೂರಿನಲ್ಲಿ ಯಂತ್ರಶ್ರೀ ಭತ್ತ ನಾಟಿಗೆ ಚಾಲನೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ಮತ್ತು ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಬನ್ನೂರು ಇದರ ಸಹಯೋಗದಲ್ಲಿ ಬನ್ನೂರಿನ ಕಂಜೂರು ರಾಮಣ್ಣ ಗೌಡರವರ ಜಮೀನಿನಲ್ಲಿ ಯಂತ್ರಶ್ರೀ ಭತ್ತ ನಾಟಿ ಜು. 11ರಂದು ನಡೆಯಿತು.

ಗ್ರಾಮಾಭಿವೃದ್ಧಿ ಯೋಜನೆಯ ಮಧ್ಯಮ ವಲಯದ ನಿರ್ದೇಶಕ ದಿನೇಶ್, ಬನ್ನೂರು ಗ್ರಾ.ಪಂ. ಅಧ್ಯಕ್ಷೆ ಜಯ ಎ., ತಾ.ಪಂ ಮಾಜಿ ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ಶೀನಪ್ಪ ಕುಲಾಲ್, ಕುಂಟ್ಯಾನ ಒಕ್ಕೂಟದ ಅಧ್ಯಕ್ಷ ರತ್ನಾಕರ ಪ್ರಭು, ಯೋಜನಾಧಿಕಾರಿ ಉಮೇಶ್ ಪೂಜಾರಿ, ಜನಜಾಗೃತಿ ವೇದಿಕೆ ಸದಸ್ಯ ಸಂಪತ್ ಕುಮಾರ್, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ತಿರುಪತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಗದ್ದೆಯಲ್ಲಿ ಯಂತ್ರ ನಾಟಿ ಪ್ರಾತ್ಯಕ್ಷಿಕೆ ನಡೆಯಿತು. ಸಂಧ್ಯಾ ಪ್ರಾರ್ಥಿಸಿದರು. ಬನ್ನೂರು ವಲಯ ಮೇಲ್ವಿಚಾರಕಿ ಪುಷ್ಪಲತಾ ಸ್ವಾಗತಿಸಿ, ಕುಂಟ್ಯಾನ ಒಕ್ಕೂಟದ ಕಾರ್ಯದರ್ಶಿ ಗಂಗಾಧರ್ ವಂದಿಸಿದರು. ಕೃಷಿ ಅಧಿಕಾರಿ ಉಮೇಶ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here