ಪುತ್ತೂರು: ಜು.19ರ ತಡರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಳಂಜದಲ್ಲಿ ತಂಡದಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಸೂದ್ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಗಂಭೀರ ಗಾಯಗೊಂಡಿದ್ದ ಮಸೂದ್ ಅವರನ್ನು
ಸುಳ್ಯ ಆಸ್ಪತ್ರೆಗೆ ತಂದು ಅಲ್ಲಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಈಗಾಗಲೇ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.