ವಿಟ್ಲ: ಆಲ್ಟೋ ಕಾರಿನಲ್ಲಿ ಜಾನುವಾರು ಸಾಗಾಟ ಪತ್ತೆ

0

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ರೆಡ್ ಹ್ಯಾಂಡ್ ಆಗಿ ಹಿಡಿದು ವಿಟ್ಲ ಠಾಣಾ ಪೊಲೀಸರಿಗೆ ಒಪ್ಪಿಸಿದ ಘಟನೆ ಜು.21ರಂದು ಪದವು ಕೋಡಂದೂರು ರಸ್ತೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ‌.

ಆಲ್ಟೋ ಕಾರಿನಲ್ಲಿ ಹಿಂಸಾತ್ಮಕವಾಗಿ ಎರಡು ಗೋವುಗಳನ್ನು ಕೂಡಿ ಹಾಕಿ ಸಾಗಾಟ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ವಾಹನದಲ್ಲಿದ್ದವರು ಪರಾರಿಯಾಗಿದ್ದು, ಸ್ಥಳಕ್ಕಾಗಮಿಸಿದ‌ ವಿಟ್ಲ ಠಾಣಾ ಪೊಲೀಸರು ಆಲ್ಟೋ ಕಾರು ಹಾಗೂ ಜಾನುವಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here