ಜು.24: ಕೆಯ್ಯೂರಿನಲ್ಲಿ ಉಚಿತ ನೇತ್ರ ತಪಾಸಣೆ, ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣೆ

0

ಪುತ್ತೂರು: ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು, ಒನ್‌ಸೈಟ್ ಎಸ್ಸಿಲೋರ್ ಲುಕ್ಷೋಟಿಕಾ ಫೌಂಡೇಶನ್, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ.ಪಿ ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ ಒಡಿಯೂರು ಶ್ರೀಗುರುದೇವ ಸೇವಾ ಬಳಗ ಅಂಕತ್ತಡ್ಕ, ಒಡಿಯೂರು ಶ್ರೀಗ್ರಾಮವಿಕಾಸ ಯೋಜನೆ ವತಿಯಿಂದ ಒಡಿಯೂರು ಶ್ರೀಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವ-ಗ್ರಾಮೋತ್ಸವ-ಗುರುವಂದನೆ ಪ್ರಯುಕ್ತ ಬೃಹತ್ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಜು.24 ರಂದು ಕೆಯ್ಯೂರು ಕರ್ನಾಟಕ ಪಬ್ಲಿಕ ಸ್ಕೂಲ್‌ನಲ್ಲಿ ನಡೆಯಲಿದೆ.

ಒಡಿಯೂರು ಶ್ರೀಗಳ ಜನ್ಮದಿನೋತ್ಸವ, ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಉದ್ಘಾಟನೆ ನೆರವೇರಿಸಲಿದ್ದು, ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಅಂಕತ್ತಡ್ಕ ಒಡಿಯೂರು ಶ್ರೀಗುರುದೇವ ಸೇವಾಬಳಗದ ಗೌರವ ಅಧ್ಯಕ್ಷ ಎಸ್.ಬಿ. ಜಯರಾಮ ರೈ ಬಳೆಜ್ಜ, ಒಡಿಯೂರು ಶ್ರೀಗಳ ಜನ್ಮದಿನೋತ್ಸವ, ಗ್ರಾಮೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಶವಂತ ವಿಟ್ಲ, ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿಗಳು, ಕೆಪಿಎಸ್ ಕೆಯ್ಯೂರು ಪ್ರಾಥಮಿಕ ವಿಭಾಗದ ಬಾಬು ಎನ್. ಉಪಸ್ಥಿತರಿರಲಿದ್ದಾರೆ.

ಕಣ್ಣಿನ ಸಂಪೂರ್ಣ ತಪಾಸಣೆ, ಅಗತ್ಯಕಂಡರೆ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆ, ಅರ್ಹರಿಗೆ ಉಚಿತ ಕನ್ನಡಕವನ್ನು ಶಿಬಿರದಲ್ಲಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9740268133, 9902203881, 8971992157ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here