ಸವಣೂರು ವಲಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಗೆ ದ್ವಿತೀಯ ಸ್ಥಾನ

0

 

ಕಾಣಿಯೂರು : ಮುಕ್ವೆ ಹಿ.ಪ್ರಾ.ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ವಿಜ್ಞಾತ್ರಿ ,ಯಶಸ್ವಿನಿ,ಜಾಹ್ನವಿ,ರಿತಿಕಾ ಅವರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರನ್ನು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ,ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು,ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಹಾಗೂ ಮುಖ್ಯಶಿಕ್ಷಕರು,ಶಿಕ್ಷಕರು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲಾ ಟ್ರಸ್ಟಿ ಹರಿಚರಣ್ ರೈ ಮತ್ತು ಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಮಾರ್ಗದರ್ಶನ ನೀಡಿದ್ದಾರೆ.

LEAVE A REPLY

Please enter your comment!
Please enter your name here