ಸ.ಪ್ರ.ದ.ಕಾಲೇಜುಗಳಲ್ಲಿರುವ ಖಾಲಿ ಹುದ್ದೆ ನೇಮಕಾತಿಗೆ ಒಪ್ಪಿಗೆ

0

ಬೆಂಗಳೂರು:ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 700 ಮಂದಿ ಕಚೇರಿ ಸಹಾಯಕರು ಹಾಗೂ 300ಕ್ಕೂ ಹೆಚ್ಚು ಮಂದಿ ಶೈಕ್ಷಣಿಕ ಸಹಾಯಕರು ಸೇರಿದಂತೆ ಒಟ್ಟು 1052 ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಸಂಪುಟ ಸಭೆ ಅನುಮೋದನೆ ನೀಡಿದೆ.

ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜರುಗಿದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳ ಜನವಸತಿ ಪ್ರದೇಶಗಳಿಗೆ ಒಟ್ಟು 1,810 ಕೋಟಿ ರೂ.ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

LEAVE A REPLY

Please enter your comment!
Please enter your name here