ರಾಮಕುಂಜ: ಪುತ್ತೂರು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯಲ್ಲಿ ಜು.22ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ನಿರಂಜನ್ ಎನ್.ಜಿ. ಪ್ರಥಮ ಹಾಗೂ 8ನೇ ತರಗತಿಯ ಭವಿಷ್ ಎಮ್.ಎಸ್. ದ್ವಿತೀಯ ಮತ್ತು 8ನೇ ತರಗತಿಯ ಮನ್ವಿತ್ ಸಿ., ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಜು.27ರಂದು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.