ರಾಮಕುಂಜೇಶ್ವರ ಆ.ಮಾ.ಶಾಲಾ ಮಂತ್ರಿಮಂಡಲ ಉದ್ಘಾಟನೆ

0

 

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಮಂತ್ರಿಮಂಡಲದ ಉದ್ಘಾಟನೆ ಜು.22ರಂದು ನಡೆಯಿತು. ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್‌ರವರು ಮಂತ್ರಿಮಂಡಲ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸುವುದರ ಜೊತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಚೌಕಟ್ಟಿನಲ್ಲಿ ದೇಶದ ಉತ್ತಮ ಪ್ರಜೆಯಾಗಬೇಕೆಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈಯವರು ಮಾತನಾಡಿ, ವಿದ್ಯಾರ್ಥಿ ಸಂಘವು ಸಕ್ರಿಯವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಪ್ರತಿ ತಿಂಗಳು ಅಧಿವೇಶನ ನಡೆಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ನೀಡಿದರು. ಮುಖ್ಯ ಅತಿಥಿಯಾಗಿದ್ದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಬಿ.ಎಲ್.ಜನಾರ್ದನರವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡಿ ಸಂಸ್ಥೆಯ ಉನ್ನತ್ತಿಗೆ ಶ್ರಮಿಸಬೇಕು ಎಂದು ಹೇಳಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ. ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್.,ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಲೋಹಿತಾ ಎ., ವಂದಿಸಿದರು. ಸಹಶಿಕ್ಷಕ ವಸಂತಕುಮಾರ್ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಭೋದಿಸಿದರು. ಸಹಶಿಕ್ಷಕ ರಾಧಕೃಷ್ಣ ಬಿ., ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here