ವಿದ್ಯಾರಶ್ಮಿಯಲ್ಲಿ ಫ್ರೆಶರ್‍ಸ್ ಡೇ

0

ಪುತ್ತೂರು: ಸವಣೂರಿನ ವಿದ್ಯಾರಶ್ಮಿ ಪದವಿ ಪೂರ್ವ ಕಾಲೇಜಿನಲ್ಲಿ 2022-23ನೆ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ನಡೆಯಿತು. ಸಂಪೂರ್ಣವಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉಸ್ತುವಾರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು ಮಾತನಾಡಿ ಈ ಕಾರ್ಯಕ್ರಮದ ಮೂಲಕವಾಗಿ ಹಳಬರು ಮತ್ತು ಹೊಸಬರು ಪರಸ್ಪರ ಆತ್ಮೀಯರಾಗಿ ಅರ್ಥೈಸಿಕೊಳ್ಳುವುದಕ್ಕೆ ಅವಕಾಶವಾಗುತ್ತದೆ ಎಂದರು. ಹೊಸದಾಗಿ ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಅವರು ಸ್ಮರಣಿಕೆಯನ್ನು ವಿತರಿಸಿದರು.

ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದ ಮುಂದಿನ 10ವರ್ಷಗಳಲ್ಲಿ ಕಠಿಣ ಪರಿಶ್ರಮ ವಹಿಸಿದರೆ ಜೀವನ ಪೂರ್ತಿ ಕೋಟ್ಯಧಿಪತಿಗಳಾಗಿ ಬದುಕಬಹುದೆಂದು ಹೇಳಿ ಈ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ಏನು ಸವಲತ್ತು ಬೇಕು ಅದನ್ನು ಎಲ್ಲವನ್ನೂ ಪೂರೈಸಲು ವಿದ್ಯಾರಶ್ಮಿ ಯಾವತ್ತೂ ಬದ್ಧವಿದೆ ಎಂದರು.

ಪ್ರಾಂಶುಪಾಲ ಸೀತಾರಾಮ ಕೇವಳ, ಉಪ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ, ಸಂಯೋಜಕಿ ಕಸ್ತೂರಿ ಕೆ.ಜಿ. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಣವ್ ಕೆ.ಯು. ಸ್ವಾಗತ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಖ್ಯಾತ್ ವಂದನಾರ್ಪಣೆ, ನಿಫಾ ಹೆಸರುಗಳ ಪ್ರಕಟಣೆ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಫಾತಿಮತ್ ಸಮ್ನಾ ಕಾರ್ಯಕ್ರಮ ನಿರ್ವಹಣೆಗಳಲ್ಲಿ ಸಹಕರಿಸಿದರು. ಇದೇ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಮತ್ತು ಮನೋಲ್ಲಾಸಕರ ಆಟಗಳಿಗೆ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here