ಗೋಳಿತ್ತೊಟ್ಟು; ಮದ್ಯವರ್ಜನ ಶಿಬಿರದ ಸಮಾಲೋಚನಾ ಸಭೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಇದರ ವತಿಯಿಂದ ಗೋಳಿತೊಟ್ಟು ಶ್ರೀ ಸಿದ್ಧಿವಿನಾಯಕ ಕಲಾಮಂದಿರದಲ್ಲಿ ನಡೆಯಲಿರುವ 1575 ಮದ್ಯವರ್ಜನ ಶಿಬಿರದ ಸಮಾಲೋಚನಾ ಸಭೆ ಇತ್ತೀಚೆಗೆ ಗೋಳಿತ್ತೊಟ್ಟು ಶ್ರೀ ಸಿದ್ಧಿವಿನಾಯಕ ಕಲಾಮಂದಿರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಗೋಳಿತೊಟ್ಟು ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷ ನೋಣಯ್ಯ ಪೂಜಾರಿ ವಹಿಸಿದ್ದರು. ದ.ಕ.ಜಿಲ್ಲೆ ವಿಭಾಗ 2ರ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಉಡುಪಿ ಪ್ರಾದೇಶಿಕ ಕಚೇರಿಯ ಜನಜಾಗೃತಿ ವಿಭಾಗದ ಯೋಜನಾಧಿಕಾರಿ ತಿಮ್ಮಯ ನಾಯ್ಕ್‌ರವರು ಶಿಬಿರದ ಕುರಿತು ವಿವರಣೆ ನೀಡಿದರು. ಗೋಳಿತೊಟ್ಟು ಗ್ರಾ.ಪಂ.ಅಧ್ಯಕ್ಷ ಜನಾರ್ದನ ಪಟೇರಿ, ಶ್ರೀ ಸಿದ್ಧಿವಿನಾಯಕ ಕಲಾಮಂದಿರದ ಅಧ್ಯಕ್ಷ ಬಾಲಕೃಷ್ಣ, ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಹಾರ್ಪಳ, ಕಡಬ ತಾಲೂಕು ಯುವಜನ ಸೇವಾ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ಮೈಲೇರಿ, ಜನಜಾಗೃತಿ ವೇದಿಕೆಯ ಸವಣೂರು ವಲಯ ಅಧ್ಯಕ್ಷ ಮಹೇಶ್ ರೈ, ಆಲಂಕಾರು ವಲಯ ಅಧ್ಯಕ್ಷ ಇಂದುಶೇಖರ ಶೆಟ್ಟಿ, ಬಿಳಿನೆಲೆ ವಲಯ ಅಧ್ಯಕ್ಷ ತಮ್ಮಣ್ಣ ಗೌಡ, ನೆಲ್ಯಾಡಿ ವಲಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಉಪಸ್ಥಿತರಿದ್ದರು. ಸಭೆಯಲ್ಲಿ ಊರಿನ ಪ್ರಮುಖರು, ಗಣ್ಯರು, ಜನಪ್ರತಿನಿಧಿಗಳು ಹಾಗೂ ಹಲವಾರು ಸಂಘ ಸಂಸ್ಥೆಗಳ ಮುಖಂಡರು, ನವಜೀವನ ಸಮಿತಿಯ ಪದಾಧಿಕಾರಿಗಳು, ಗೋಳಿತೊಟ್ಟು ವಲಯದ ಮೇಲ್ವಿಚಾರಕಿ ಸುಜಾತ ಮತ್ತು ಸೇವಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಉಪನ್ಯಾಸಕ ಅಜಿತ್ ಕುಮಾರ್ ಪಾಲೇರಿಯವರನ್ನು ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಆ.೨೨ರಿಂದ ೨೮ರ ತನಕ ಶಿಬಿರ ನಡೆಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಕಾರ್ಯಕ್ರಮದ ಸಂಯೋಜನೆ, ಶಿಬಿರಾರ್ಥಿಗಳ ಗುರುತಿಸುವಿಕೆ, ವಸ್ತು ರೂಪದ ದೇಣಿಗೆ ಸಂಗ್ರಹ ಸೇರಿದಂತೆ ಹಲವಾರು ವಿಚಾರಗಳ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.

ಕಡಬ ವಲಯದ ಮೇಲ್ವಿಚಾರಕ ರವಿಪ್ರಸಾದ್ ನಿರೂಪಿಸಿದರು. ತಾಲೂಕು ಯೋಜನಾಧಿಕಾರಿ ಮೇದಪ್ಪ ಎನ್., ಸ್ವಾಗತಿಸಿ, ಗೋಳಿತೊಟ್ಟು ವಲಯ ಒಕ್ಕೂಟದ ಅಧ್ಯಕ್ಷ ವೀರೇಂದ್ರ ವಂದಿಸಿದರು.

LEAVE A REPLY

Please enter your comment!
Please enter your name here