ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

0

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಹಾಗೂ ಲಯನ್ಸ್ ಕ್ಲಬ್ ಮಾಣಿ ಇದರ ಜಂಟಿ ಆಶ್ರಯದಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮತ್ತು ಮಾಣಿ ಕರ್ನಾಟಕ ಪ್ರೌಢ ಶಾಲೆಯ ಎಸ್.ಎಸ್.ಎಲ್. ಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವು ಮಾಣಿ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ನಡೆಯಿತು.


ಶಾಲಾ ಆಡಳಿತಾಧಿಕಾರಿ ರವೀಂದ್ರ ಡಿ.ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಜ್ಞಾನ ಮಾತ್ರ ಮುಖ್ಯವಲ್ಲ ಆಯ್ಕೆಮಾಡುವ ದಾರಿ ಮುಖ್ಯ. ಭವಿಷ್ಯದ ಆಯ್ಕೆ ಸೂಕ್ತವಾಗಿದ್ದರೆ ಯಶಸ್ಸು ನಿಮ್ಮದಾಗುತ್ತದೆ. ಈ ಹಂತದಲ್ಲಿ ಮಾರ್ಗದರ್ಶನದ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ಜೆ. ಪ್ರಹ್ಲಾದ್ ಶೆಟ್ಟಿರವರು ಮಾತನಾಡಿ ವಿದ್ಯಾರ್ಥಿಗಳಿಗೆ ಸಾಧಿಸುವ ಛಲವಿದ್ದರೆ ಏನೇ ಕಷ್ಟವಿದ್ದರೂ ಗುರಿ ಮುಟ್ಟಬಹುದು. ಜೀವನದಲ್ಲಿ ಇಂದಿನ ಮಾರ್ಗದರ್ಶನದ ಅಂಶಗಳನ್ನು ಅಳವಡಿಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಮಾಣಿ ಕರ್ನಾಟಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ಕೆ ಭಂಡಾರಿ, ಲಯನ್ಸ್ ನ ಪದಾಧಿಕಾರಿಗಳಾದ ರತ್ನಾಕರ ರೈ ಶಬರಿ ,ಕೂಸಪ್ಪ ಪೂಜಾರಿ ಪಿ, ನಾರಾಯಣ ಸಾಲ್ಯಾನ್, ಪ್ರೊಫೆಸರ್ ಜಗದೀಶ್ ಭಟ್, ರವಿಕಿರಣ್ ಶೆಟ್ಟಿ, ಗಂಗಾಧರ ರೈ ,ಅಕ್ಷಯ್ ಹೆಗ್ದೆ ಮೊದಲಾದವರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಇಂಡಿವಿಜುವಲ್ ಡೆವಲಪ್‌ಮೆಂಟ್ ನ ನಿರ್ದೇಶಕರು ಮತ್ತು ಸಂತ ಅಲೋಶಿಯಸ್ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಪ್ರೊ. ರೊನಾಲ್ಡ್ ಪಿಂಟೋರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಲಯನ್ಸ್ ಕ್ಲಬ್ ಮಾಣಿ ಘಟಕದ ಅಧ್ಯಕ್ಷ ಉಮೇಶ್ ಸ್ವಾಗತಿಸಿದರು. ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ವಿ. ಶೆಟ್ಟಿ ವಂದಿಸಿದರು. ಶಿಕ್ಷಕಿ ಸುಧಾ ಎನ್. ರಾವ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here