ಕಡಬ ತಾಲೂಕು ಗ್ರಾ.ಪಂ.ನೌಕರರ ಶ್ರೇಯೋಭಿವೃದ್ಧಿ ಸಂಘದ ಸಭೆ

0

 

ಕಡಬ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ದಿ ಸಂಘ ಆರ್.ಡಿ.ಪಿ.ಆರ್ ಕಡಬ ತಾಲೂಕು ಸಮಿತಿಯ ೩ನೇ ಸಭೆ ಮತ್ತು ಆಗಸ್ಟ್ ತಿಂಗಳಿನಲ್ಲಿ ಮಂಗಳೂರಿನಲ್ಲಿ ನಡೆಯುವ ಜಿಲ್ಲಾ ಸಮಾವೇಶದ ಬಗ್ಗೆ ತಾಲೂಕು ಮಟ್ಟದ ಪೂರ್ವಾಭಾವಿ ಸಭೆಯು ಕಡಬ ತಾಲೂಕು ಸಮಿತಿಯ ಅಧ್ಯಕ್ಷೆ ಪುಷ್ಪಲತಾ ಗೋಳಿತೊಟ್ಟು ಇವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ಜು.23ರಂದು ಜರುಗಿತು.


ಸುಳ್ಯ ತಾಲೂಕು ಸಮಿತಿಯ ಪದಾಧಿಕಾರಿ ವಿಜಯಕಾಂತ ದೇವಚಳ್ಳರವರು ಜಿಲ್ಲಾ ಸಮಾವೇಶದ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಒಟ್ಟಾಗಿ ಒಗ್ಗಟ್ಟಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮತ್ತು ಆಗಸ್ಟ್‌ನಲ್ಲಿ ನಡೆಯುವ ಜಿಲ್ಲಾ ಸಮಾವೇಶದಲ್ಲಿ ಗ್ರಾಮ ಪಂಚಾಯತ್‌ನ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿ ಸಂಘಕ್ಕೆ ನಮ್ಮ ಬೆಂಬಲವನ್ನು ಸೂಚಿಸೋಣ ಎಂದರು.

ಗ್ರಾಮ ಪಂಚಾಯತ್ ನೌಕರರ ಏಳಿಗೆಗಾಗಿ ಆಗಬೇಕಾದ ಸೌಲಭ್ಯಗಳ ಬಗ್ಗೆ ಮುಖ್ಯಮಂತ್ರಿಯವರಿಗೆ ಪ್ರತಿ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಮನವಿಯನ್ನು ಸಲ್ಲಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಇಪಿಎಲ್ ಮತ್ತು ಇಎಸ್‌ಐ ಬಗ್ಗೆಯೂ ಚರ್ಚಿಸಲಾಯಿತು. ಈ ಬಗ್ಗೆ ಎಲ್ಲಾ ಗ್ರಾಮ ಪಂಚಾಯತ್‌ನ ಸಿಬ್ಬಂದಿಗಳು ತಮ್ಮ ಅಭಿಪ್ರಾಯವನ್ನು ತಿಳಿಸಬೇಕಾಗಿದೆ. ಎಲ್ಲರ ಅಭಿಪ್ರಾಯ ತಾಲೂಕು ಸಮಿತಿಗೆ ಸಿಕ್ಕಿದ ನಂತರ ತಾಲೂಕು ಸಮಿತಿಯಿಂದ ಈ ಬಗ್ಗೆ ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಡಬ ತಾಲೂಕು ಸಮಿತಿ ಅಧ್ಯಕ್ಷೆ ಪುಷ್ಪಲತಾರವರು ಮಾತನಾಡಿ, ಜಿಲ್ಲಾ ಸಮಾವೇಶದಲ್ಲಿ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿ ನಮ್ಮೆಲ್ಲರ ಬೆಂಬಲವನ್ನು ನೀಡೋಣ. ನಮ್ಮ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವಲ್ಲಿ ತಾಲೂಕು ಸಮಿತಿಯ ವತಿಯಿಂದ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ. ತಾಲೂಕು ಸಮಿತಿಯ ಇಂದಿನ ಸಭೆಯ ಎಲ್ಲಾ ತೀರ್ಮಾನಗಳಿಗೆ ಎಲ್ಲರ ಸಹಕಾರ ನೀಡಬೇಕೆಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಸಮಿತಿ ಪದಾಧಿಕಾರಿ ಮಮತಾ ಬೆಳಂದೂರು, ಕಡಬ ತಾಲೂಕು ಸಮಿತಿಯ ಪದಾಧಿಕಾರಿಗಳು ಮತ್ತು ಕಡಬ ತಾಲೂಕಿನ ಗ್ರಾಮ ಪಂಚಾಯತ್‌ನ ಸಿಬ್ಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here