ಆ.25 : ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ

0

ಪುತ್ತೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ದೇವಾಲಯದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಸಲ್ಲಿಸಬಹುದು.

 

ಪ್ರೋತ್ಸಾಹಧನ ಸಲಭ್ಯಗಳು : ಸರಳ ಸಾಮೂಹಿಕ ವಿವಾಹವಾಗುವ ವರನಿಗೆ ದೇವಾಲಯದ ವತಿಯಿಂದ ಪ್ರೋತ್ಸಾಹಧನಾಗಿ ರೂ.5 ಸಾವಿರ ಹಾಗೂ ವಧುವಿಗೆ ರೂ.10 ಸಾವಿರ ನೀಡಲಾಗುವುದು. ಸುಮಾರು ರೂ.೪೦ ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ಭರಿಸಲಾಗುವುದು. ವಿವಾಹಕ್ಕೆ ಆಗಮಿಸುವ ವಧುವರರು ಮತ್ತು ಅವರ ಬಂಧುಗಳಿಗೆ, ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಅವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ಮಾಡಲಾಗುವುದು. ಸರಳ ಸಾಮೂಹಿಕ ವಿವಾಹವಾಗುವ ವಧುವಿಗೆ ಕಂದಾಯ ಇಲಾಖೆಯ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ ರೂ.೧೦ ಸಾವಿರ ನಿಶ್ಚಿತ ಠೇವಣಿ ಸೌಲಭ್ಯವನ್ನು ಒದಗಿಸಲಾಗುವುದು. ವಿವಾಹವಾಗುವ ಪರಿಶಿಷ್ಟ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ ರೂ.೫೦ ಸಾವಿರಗಳನ್ನು ಒದಗಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಸಲ್ಲಿಸಬೇಕಾದ ದಾಖಲೆಗಳು : ವಧೂವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್‌ಪೋರ್ಟ್ ಸೈಜ್‌ನ 2 ಫೊಟೊ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧೂವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಗ್ರಾ.ಪಂ. ಅಥವಾ ಸಂಬಂಧಪಟ್ಟ ಸರಕಾರಿ ಇಲಾಖಾಧಿಕಾರಿಗಳಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಆ.25ರಂದು ಬೆಳಿಗ್ಗೆ 9 ರಿಂದ 9.50ರ ವರೆಗಿನ ಕನ್ಯಾ ಲಗ್ನ ಸುಮುಹೂರ್ತದಲ್ಲಿ ವಿವಾಹ ನೆರವೇರಲಿದೆ. ಆ.4ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆ.8ರಂದು ನೋಂದಾಯಿತ ವಧೂವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು. ಆ.13 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ. ಆ.೧೫ರಂದು ವಧೂವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

LEAVE A REPLY

Please enter your comment!
Please enter your name here