ಸನ್ಯಾಸಿಗುಡ್ಡೆ: ಪ್ರಥಮ ವರ್ಷದ ವರಮಹಾಲಕ್ಷ್ಮಿ ವೃತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಶ್ರೀರಾಮ ಮಂದಿರ ಕೆದಂಬಾಡಿ ಸನ್ಯಾಸಿಗುಡ್ಡೆ ಮತ್ತು ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಇವುಗಳ ಜಂಟಿ ಆಶ್ರಯದಲ್ಲಿ ಆ. 5 ರಂದು ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯ ಆಮಂತ್ರಣ ಪತ್ರವನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಶ್ರೀರಾಮ ಮಂದಿರದ ಆಡಳಿತ ಸಮಿತಿಯವರು, ಭಜನಾ ಮಂಡಳಿಯ ಪದಾಧಿಕಾರಿಗಳು, ಶ್ರೀ ವರಮಹಾಲಕ್ಷ್ಮಿ ವೃತ ಪೂಜಾ ಸಮಿತಿಯ ಅಧ್ಯಕ್ಷೆ ಇಂದಿರಾ ಎಸ್. ಗೌಡ, ಕಾರ್ಯದರ್ಶಿ ಅಶ್ವಿನಿ ಎಸ್. ರೈ, ಕೋಶಾಧಿಕಾರಿ ಶಕಿಲಾ ಎಸ್. ರೈ ಮತ್ತು ಸದಸ್ಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here