ಕಾರ್ಗಿಲ್ ಯುದ್ಧವು ದೇಶ ಪ್ರತಿ ಕ್ಷಣ ಸೈನಿಕರನ್ನು ನೆನಪಿಸಿಕೊಳ್ಳುವಂತೆ ಮಾಡಿದೆ – ಕಿಲ್ಲೆ ಮೈದಾನದ ಅಮರ್‌ಜವಾನ್ ಜ್ಯೋತಿ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ ದಿನಾಚರಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ

0

 

ಪುತ್ತೂರು: ಸಂಕಟ ಬಂದಾಗ ವೆಂಕಟರಮಣ ಎಂಬಂತೆ ದೇಶಕ್ಕೆ ಸಂಕಟ ಬಂದಾಗ ಮಾತ್ರ ನೆನಪಾಗುತ್ತಿದ್ದ ಸೈನಿಕರನ್ನು ಕಾರ್ಗಿಲ್ ಯುದ್ಧದ ಬಳಿಕ ದೇಶ ಪ್ರತಿ ಕ್ಷಣ ಸೈನಿಕರನ್ನು ನೆನಪಿಸಿಕೊಳ್ಳುತ್ತಿರುವುದು ದೇಶ ಪ್ರೇಮವನ್ನು ಹೆಚ್ಚಿಸಿದೆ ಎಂದು ಯುವಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಹೇಳಿದರು.

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ಮಾಜಿ ಸೈನಿಕರ ಸಂಘ ಹಾಗೂ ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಆಶ್ರಯದಲ್ಲಿ ಜು. 26ರಂದು ಬೆಳಗ್ಗೆ ಪುತ್ತೂರು ಕಿಲ್ಲೆ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಎದುರು ನಡೆದ ಕಾರ್ಗಿಲ್ ವಿಜಯ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಮಾಜಿ ಸೈನಿಕರ ಸಂಘದ ಅಧ್ಯಕ್ಷ ರಾಮಚಂದ್ರ ಪುಚ್ಚೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಉಪಾಧ್ಯಕ್ಷೆ ವಿದ್ಯಾಗೌರಿ, ಸಹಾಯಕ ಆಯುಕ್ತ ಗಿರೀಶ್ ನಂದನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಶ್ ಶೆಟ್ಟಿ, ಗಣೇಶ್ ಪ್ರಸಾದ್, ನೆಲ್ಲಿಕಟ್ಟೆ ಪಿ ಯು‌ ಕಾಲೇಜು ಪ್ರಾಂಶುಪಾಲ ಸತ್ಯಜಿತ್‌ ಉಪಾಧ್ಯಾಯ ಎಂ., ರಾಜೇಶ್ವರಿ ನಟ್ಟೋಜ ಅತಿಥಿಗಳನ್ನು ಗೌರವಿಸಿದರು. ರಾಕೇಶ್ ಕಮ್ಮಾಜೆ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಆರಂಭದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here