4 ಚಕ್ರದ ವಾಹನಗಳನ್ನು ಹೊಂದಿರುವವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ದಂಡ

0

ಬೆಂಗಳೂರು:ಬಿಪಿಎಲ್ ಕಾರ್ಡ್ ಅಕ್ರಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಇದೀಗ ನಾಲ್ಕು ಚಕ್ರ ವಾಹನಗಳನ್ನು ಹೊಂದಿರುವ ಬಿಪಿಎಲ್ ಪಡಿತರ ಚೀಟಿದಾರರ ಮಾಹಿತಿಯನ್ನು ಕಲೆ ಹಾಕುತ್ತಿದ್ದು, ಅಂತಹ ವ್ಯಕ್ತಿಗಳಿಗೆ ದಂಡವನ್ನು ವಿಧಿಸಲು ಪಟ್ಟಿಯನ್ನು ತಯಾರಿಸುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ. ಇದು ನಾಲ್ಕು ಚಕ್ರಗಳ ವಾಹನ ಹೊಂದಿ ಬಿಪಿಎಲ್, ಅಂತ್ಯೋದಯ ಆಹಾರ ಪಡಿತರ ಕಾರ್ಡ್ ಹೊಂದಿರುವವರಿಗೆ ಶಾಕ್ ನೀಡಲಿದೆ.

ನಾಲ್ಕು ಚಕ್ರ ಹೊಂದಿರುವ ರಾಜ್ಯದ 12,584 ಪಡಿತರ ಚೀಟಿದಾರರಿಗೆ ದಂಡ ಪಾವತಿಸುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಈ ಹಿಂದೆ ನಾಲ್ಕು ಚಕ್ರದ ವಾಹನ ಹೊಂದಿದ್ದಂತ ಈ ಪಡಿತರ ಚೀಟಿದಾರರಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಹಿಂದಿರುಗಿಸದ ಕಾರಣ, ಇದೀಗ ಸರ್ಕಾರ ದಂಡದ ಅಸ್ತ್ರವನ್ನು ಪ್ರಯೋಗಿಸಿದೆ ಎನ್ನಲಾಗುತ್ತಿದೆ. ನಾಲ್ಕು ಚಕ್ರಗಳ ವಾಹನ ಹೊಂದಿರುವವರು ಅಂತ್ಯೋದಯ, ಬಿಪಿಎಲ್ ಚೀಟಿ ಹೊಂದಿದ್ದರೆ 2019, ಸೆಪ್ಟೆಂಬರ್ 3ರೊಳಗೆ ವಾಪಾಸ್ ನೀಡುವಂತೆ ಸರಕಾರ ಸೂಚಿಸಿತ್ತು. ಆ ಬಳಿಕ ಅವಽಯನ್ನು ವಿಸ್ತರಣೆ ಕೂಡ ಮಾಡಲಾಗಿತ್ತು. ಆದರೂ ಯಾವುದೇ ನಾಲ್ಕು ಚಕ್ರ ಹೊಂದಿರುವ ಪಡಿತರ ಚೀಟಿದಾರರು ಕಾರ್ಡ್ ಸರೆಂಡರ್ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ನಾಲ್ಕು ಚಕ್ರಗಳ ವಾಹನ ಹೊಂದಿರುವಂತ ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ನೋಟಿಸ್ ನೀಡಲಾಗುತ್ತಿದೆ. ನೋಟಿಸ್ ತಲುಪಿದ 3 ದಿನಗಳ ಒಳಗೆ ಕಾರ್ಡ್ ದಾರರು ತಾಲೂಕು ಕಚೇರಿಯ ಆಹಾರ ವಿಭಾಗಕ್ಕೆ ಹಾಜರಾಗಿ, ದಂಡದ ಮೊತ್ತವನ್ನು ಪಾವತಿಸುವಂತೆ ಸೂಚಿಸಲಾಗಿದೆ. ದಂಡದ ಮೊತ್ತವನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ವಿಽಸಲಾಗಿದೆ. ಈ ದಂಡ ಕಟ್ಟಿದ ಬಳಿಕ ಅಂತ್ಯೋದಯ, ಬಿಪಿಎಲ್ ಕಾರ್ಡ್ ಅನ್ನು ಎಪಿಎಲ್ ಆಗಿ ಪರಿವರ್ತಿಸಲಾಗುತ್ತದೆ ಎಂದು ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here