ಈಶ್ವರಮಂಗಲ : 1562ನೇ ಮದ್ಯವರ್ಜನ ಶಿಬಿರ

0

ಈಶ್ವರಮಂಗಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ತಾಲೂಕು ಜನಜಾಗೃತಿ ವೇದಿಕೆ ಪುತ್ತೂರು, ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಈಶ್ವರಮಂಗಲ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಈಶ್ವರಮಂಗಲ, ಗ್ರಾಮ ಪಂಚಾಯತ್ ನೆಟ್ಟಣಿಗೆ ಮುಡ್ನೂರು, ಗ್ರಾಮಾಂತರ ಪೋಲಿಸ್ ಠಾಣೆ ಸಂಪ್ಯ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರು ಕಾವು, ಹಾಲು ಉತ್ಪಾದಕರ ಸಹಕಾರಿ ಸಂಘ ಈಶ್ವರಮಂಗಲ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು, ನವಜೀವನ ಸಮಿತಿ, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನ ಕೇಂದ್ರ, ಲಾಯಿಲ ಬೆಳ್ತಂಗಡಿ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ 1562ನೇ ಮದ್ಯವರ್ಜನ ಶಿಬಿರವು ಜು.25ರಂದು ಉದ್ಘಾಟನೆಗೊಂಡಿತು.

ಈ ಶಿಬಿರವು ಆ.1ರವರೆಗೆ ನಡೆಯಲಿದೆ. ಮದ್ಯವರ್ಜನ ಶಿಬಿರದ ಉದ್ಘಾಟನೆಯನ್ನು ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಇವರು ನಡೆಸಿದರು. ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಜಿ. ಮಹಾಬಲ ರೈ ಅಧ್ಯಕ್ಷತೆಯನ್ನು ವಹಿಸಿದ್ದರು. ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ರಮೇಶ್ ರೈ ಸಾಂತ್ಯ, ದ.ಕ. ಜಿಲ್ಲೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಈಶ್ವರಮಂಗಲ ಗ್ರಾಮಾಂತರ ಪೋಲಿಸ್ ಠಾಣೆಯ ಎ.ಎಸ್.ಐ ಶ್ರೀಧರ ರೈ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಮಂಜುನಾಥ ರೈ ಇವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಶ್ರೀ ಗಜಾನನ ವಿದ್ಯಾಸಂಸ್ಥೆಯ ಸಂಚಾಲಕ ಶಿವರಾಮ ಪಿ., ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ರವೀಂದ್ರ ಮಾಣಿಲತ್ತಾಯ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ವಿಕ್ರಮ್ ರೈ ಸಾಂತ್ಯ, ನಿವೃತ್ತ ಶಿಕ್ಷಕಿ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಸರೋಜಿನಿ ನಾಗಪ್ಪಯ್ಯ, ಪ್ರಗತಿಪರ ಕೃಷಿಕರಾದ ನವೀನ್ ಕುಕ್ಕುಡೇಲು, ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಆನಂದ ಕೆ., ಅರಿಯಡ್ಕ ವಲಯದ ಮೇಲ್ವಿಚಾರಕ ಮೋಹನ್ ಕೆ., ನಾಗಪ್ಪ ಗೌಡ ಬೊಮ್ಮೆಟ್ಟಿ, ರಾಮ ಮೇನಾಲ, ಸದಾಶಿವ ರೈ ಸೂರಂಬೈಲು, ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಜೀರ್ಣೋದ್ಧಾರ ಸಮಿತಿಯ ಜೊತೆ ಕಾರ್ಯದರ್ಶಿ ಶ್ರೀನಿವಾಸ ಗೌಡ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಪುತ್ತೂರು ತಾಲೂಕು ಜನಜಾಗೃತಿ ಸಮಿತಿಯ ಸದಸ್ಯರು, ಪುತ್ತೂರು ತಾಲೂಕು ಮೇಲ್ವಿಚಾರಕಿಯರು ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಯೋಜನಾಧಿಕಾರಿಯಾದ ಆನಂದ ಕೆ. ಸ್ವಾಗತಿಸಿ, ಕೆದಂಬಾಡಿ ವಲಯದ ಮೇಲ್ವಿಚಾರಕರಾದ ಶೃತಿ ವಂದಿಸಿದರು.

LEAVE A REPLY

Please enter your comment!
Please enter your name here