ಜು.30: ಸಿಇಟಿ ಫಲಿತಾಂಶ

0

ಪುತ್ತೂರು:ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಿದ್ದ 2022-23ನೇ ಸಾಲಿನ ರಾಜ್ಯ ಸಿಇಟಿ ಫಲಿತಾಂಶ ಜು.30ಕ್ಕೆ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದಾರೆ.

ಕಳೆದ ಜೂನ್ 16 ರಿಂದ 18ರವರೆಗೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆ-ಸಿಇಟಿ) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜು.17ಕ್ಕೆ ಪ್ರಕಟಿಸುವುದಾಗಿ ಹೇಳಿತ್ತು. ಅದರಂತೆ ಫಲಿತಾಂಶ ಪ್ರಕಟಿಸಲು ಕೆಇಎ ಸಿದ್ಧವಿದ್ದರೂ ಸಿಬಿಎಸ್‌ಇ ಮತ್ತು ಐಸಿಎಸ್‌ಇ 12ನೇ ತರಗತಿ ಫಲಿತಾಂಶಗಳು ಪ್ರಕಟವಾಗುವುದು ತಡವಾದ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿರಲಿಲ್ಲ.

LEAVE A REPLY

Please enter your comment!
Please enter your name here