ದರ್ಬೆ: ಲಿಟ್ಲ್ ಫ್ಲವರ್ ಶಾಲೆಯಲ್ಲಿ ಸಂಸ್ಥಾಪನಾ ದಿನಾಚರಣೆ

0

ಪುತ್ತೂರು; ದರ್ಬೆಯ ಲಿಟ್ಲ್ ಫ್ಲವರ್ ಶಾಲಾ ಮಾತೃ ಸಂಸ್ಥೆ ಬೆಥನಿ ಸಂಸ್ಥೆಯ 101ನೇ ಸಂಸ್ಥಾಪನಾ ದಿನಾಚರಣೆಯು ಶಾಲಾ ಮುಖ್ಯ ಶಿಕ್ಷಕಿ ವೆನಿಶಾ ಬಿ.ಎಸ್.ರವರ ಅಧ್ಯಕ್ಷತೆಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ರಘುನಾಥ ರೈ ಹಾಗೂ ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮಾತನಾಡಿ ಶುಭ ಹಾರೈಸಿದರು. ವಿನೀತಾ ಪಿರೇರಾ ವೇದಿಕೆಯಲ್ಲಿ ಉಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ವೆನಿಶಾ ಬಿ ಎಸ್ ಸ್ವಾಗತಿಸಿ, ಶಿಕ್ಷಕಿ ಜೋಸ್ಲಿನ್ ಪಾಯಸ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು. 7ನೇ ತರಗತಿ ವಿದ್ಯಾರ್ಥಿಗಳ ಪ್ರಾರ್ಥನಾ ವಿಧಿಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ 6ನೇ ತರಗತಿ ವಿಧ್ಯಾರ್ಥಿಗಳು ಸಂಸ್ಥಾಪಕ ಬಗೆಗಿನ ವಿಶಿಷ್ಠವಾದ ನೃತ್ಯರೂಪಕ ಪ್ರಸ್ತುತ ಪಡಿಸಿದರು.

LEAVE A REPLY

Please enter your comment!
Please enter your name here