ವಿವೇಕಾನಂದ ಮಹಾವಿದ್ಯಾಲಯದ ವಾರ್ಷಿಕೋತ್ಸವ

0

ಕಾರ್ಯ ಸಾಧನೆ ಮಾಡಲು ಸ್ಪಷ್ಟ ಗುರಿಯನ್ನು ನಿಗದಿಪಡಿಸಿಕೊಳ್ಳಿ- ಸಂಜೀವ ಮಠಂದೂರು

ಪುತ್ತೂರು: ಯಾವ ವ್ಯಕ್ತಿ ಉತ್ತಮ ಶಿಕ್ಷಣವನ್ನು ಪಡೆಯುತ್ತಾನೋ ಅವನು ಸಮಾಜದಲ್ಲಿ ಉತ್ತಮ ಜೀವನವನ್ನು ನಡೆಸಬಲ್ಲ. ನಮ್ಮ ವ್ಯಕ್ತಿತ್ವವನ್ನು ಉತ್ತಮವಾಗಿ ರೂಪುಗೊಳಿಸಲು ಸ್ವಾಮೀ ವಿವೇಕಾನಂದರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಬೇಕು. ಜೊತೆಗೆ ನಮ್ಮ ಗುರಿಗಳನ್ನು ತಲುಪಲು ಕಠಿಣ ಪರಿಶ್ರಮವನ್ನೂ ಮಾಡಬೇಕು .ಅಲ್ಲದೇ ನಮ್ಮ ಭವಿಷ್ಯಕ್ಕಾಗಿ ನಾವು ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯಬೇಕು ಎಂದು ಪುತ್ತೂರು ಶಾಸಕ ಶಾಸಕ ಸಂಜೀವ ಮಠಂದೂರು ಹೇಳಿದರು.

ಇವರು ಪುತ್ತೂರಿನ ವಿವೇಕಾನಂದ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕರ್ನಾಟಕ ಸರಕಾರದ ಅಡ್ವೋಕೇಟ್ ಜನರಲ್ ಅರುಣ ಶ್ಯಾಮ ಮಾತನಾಡಿ, ವಿದ್ಯಾರ್ಥಿಗಳು ಈ ಸಮಯದಲ್ಲಿ ಶಿಕ್ಷಣಕ್ಕೆ ಒತ್ತು ನೀಡಬೇಕು ಹಾಗೂ ಉತ್ತಮ ಶಿಕ್ಷಣವನ್ನು ಪಡೆದುಕೊಂಡು ದೇಶಸೇವೆಯನ್ನು ಮಾಡಲು ಮುನ್ನುಗ್ಗುವ ಉತ್ತಮ ತರುಣ ಪಡೆ ನೀವಾಗಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ, ಆಧುನೀಕರಣವೇ ಬೇರೆ, ಪಾಶ್ಚಾತೀಕರಣವೇ ಬೇರೆ ಅದನ್ನು ಮೊದಲಾಗಿ ಭಾರತೀಯರು ಅರಿಯಬೇಕು. ದೇಶಕ್ಕಾಗಿ ಶ್ರಮಿಸಿದ ಎಲ್ಲಾ ಸ್ವಾತಂತ್ರ ಹೋರಾಟಗಾರರನ್ನು ಸ್ಮರಿಸುವುದು ಭಾರತೀಯನ ಆದ್ಯ ಕರ್ತವ್ಯವೂ ಆಗಿದೆ. ಇಲ್ಲಿನ ಆಚಾರ ವಿಚಾರ ಧರ್ಮ, ಸಂಸ್ಕೃತಿ ಮೌಲ್ಯಗಳು ಅತ್ಯಂತ ವಿಶೇಷ ಉಳ್ಳದ್ದು. ಹಾಗಾಗಿ ಇಂದು ನಮ್ಮ ದೇಶವನ್ನು ಎಲ್ಲರೂ ತಿರುಗಿ ನೋಡುವಂತಾಗಿದೆ ಎಂದರು. ಗೌರವ ಉಪಸ್ಥಿತಿ ವಹಿಸಿದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಏನೆಲ್ಲಾ ಕಲಿಯಲು ಅವಕಾಶವಿದೆಯೋ ಅದನ್ನು ಕಲಿತುಕೊಂಡು ವಿದ್ಯಾರ್ಥಿಗಳು ಅಧ್ಯಯನ ಶೀಲರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಬಹುಮಾನ ವಿತರಣೆ : ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳಲ್ಲಿ ರ‍್ಯಾಂಕ್ ವಿಜೇತರಿಗೆ ಸನ್ಮಾನ ಮಾಡಲಾಯಿತು. ಜೊತೆಗೆ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸಿದ ಎನ್‌ಸಿಸಿ ಕೆಡೆಟ್ ಹೇಮಸ್ವಾತಿ ಹಾಗೂ ಯಶಿತಾ, ಸಾಹಿತ್ಯ ರವರನ್ನು ಸನ್ಮಾನಿಸಲಾಯಿತು ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ವೇದಿಕೆಯಲ್ಲಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್, ಕಾಲೇಜಿನ ಪ್ರಾಂಶುಪಾಲ ಪ್ರೋ.ವಿಷ್ಣು ಗಣಪತಿ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ನಿವೃತ್ತ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ವಾರ್ಷಿಕ ವರದಿ ವಾಚಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಪ್ರಾಸ್ತಾವಿಕ ಮಾತುಗಳಾನ್ನಾಡಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ಎಚ್.ಜಿ ಸ್ವಾಗತಿಸಿ ಉಪನ್ಯಾಸಕಿಯರಾದ ಡಾ.ವಿಜಯಸರಸ್ವತಿ ಹಾಗೂ ಡಾ.ರೇಖಾ ಪಿ.ಎಂ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here