ಕುಂತೂರು: ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ವಿಚಾರ ಸಂಕಿರಣ

0

ಕಡಬ: ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ನೂತನ “ರಾಷ್ಟ್ರೀಯ ಶಿಕ್ಷಣ ನೀತಿ-2020” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಿತು.


ವಿಚಾರ ಸಂಕಿರಣವನ್ನು ಕಾಲೇಜಿನ ವ್ಯವಸ್ಥಾಪಕಾದ ರೆ| ಡಾ| ಫಾ| ಎಲ್ದೊ ಪುತ್ತನ್‌ಕಂಡತ್ತಿಲ್ ಅಧ್ಯಕ್ಷತೆ ವಹಿಸಿ, ಪ್ರಸ್ತುತ ರಾಷ್ಟ್ರೀಯ ಶಿಕ್ಷಣ ನೀತಿ-2020ಯ ಅಗತ್ಯತೆ ಮತ್ತು ಅದರ ಸರಿಯಾದ ಅನುಷ್ಠಾನದ ಬಗ್ಗೆ ಆಶಾಭಾವನೆ ವ್ಯಕ್ತಪಡಿಸಿದರು. ಕಾರ್‍ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ| ರವಿ ಎಂ.ಎಸ್ ಇವರು ವಿಚಾರ ಸಂಕಿರಣವನ್ನು ಉದ್ಘಾಟಿಸಿ, ದೇಶದ ಭವಿಷ್ಯ ರೂಪುಗೊಳ್ಳಲು ಪೂರಕವಾದ ಶೈಕ್ಷಣಿಕ ಕ್ಷೇತ್ರದ ಗುಣಮಟ್ಟವನ್ನು ಸುಧಾರಿಸಲು ಅತ್ಯಂತ ಅವಶ್ಯಕ ಹಾಗೂ ಅನಿವಾರ್ಯವಾದ ನೂತನ “ರಾಷ್ಟ್ರೀಯ ಶಿಕ್ಷಣ ನೀತಿಯ” ಕುರಿತು ಹಿನ್ನೆಲೆ, ಪ್ರಸ್ತುತತೆ, ಉದ್ದೇಶ ಹಾಗೂ ವಿವಿಧ ಹಂತಗಳಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುವ ಕುರಿತಂತೆ ಸವಿವರವಾದ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಉಷಾ ಎಂ.ಎಲ್ ಉಪಸ್ಥಿತರಿದ್ದರು. ಕಾಲೇಜಿನ ವಾಣಿಜ್ಯ ಸಂಘದ ಆಶ್ರಯದಲ್ಲಿ ಆಯೋಜಿಸಲಾದ ವಿಚಾರ ಸಂಕಿರಣದಲ್ಲಿ ಸಂಘದ ಸಂಯೋಜಕರಾದ ಪ್ರಾಧ್ಯಾಪಕ ರಘುನಂದನ. ಕೆ ಸ್ವಾಗತಿಸಿ, ಸಂಘದ ಅಧ್ಯಕ್ಷೆ ಪ್ರಶಿಕ್ಷಣಾರ್ಥಿ ಕು| ಜೆಸ್ಲಿನ್ ಜೋಸೆಫ್ ವಂದಿಸಿ, ಕು| ಅನುಶ್ರೀ ಕೆ. ಎಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here