ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ನೇತ್ರ, ದೃಷ್ಟಿ ತಪಾಸಣಾ ಶಿಬಿರ

0

  • ಕಣ್ಣಿನ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಜೆ. ಪ್ರಹ್ಲಾದ ಶೆಟ್ಟಿ

ವಿಟ್ಲ:ರೋಟರಿ ಕ್ಲಬ್ ಬಂಟ್ವಾಳ ಮತ್ತು ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ ಇದರ ಸಹಯೋಗದಲ್ಲಿ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಉಚಿತ ನೇತ್ರ ದೃಷ್ಟಿ ತಪಾಸಣಾ ಶಿಬಿರವು ಮಾಣಿ ಬಾಲವಿಕಾಸ ಆಂಗ್ಲ.ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಶಾಲಾ ಸಂಚಾಲಕರಾದ ಜೆ. ಪ್ರಹ್ಲಾದ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಣ್ಣಿನ ಸಮಸ್ಯೆಗಳ ಬಗ್ಗೆ ನಿರ್ಲಕ್ಷ ಸಲ್ಲದು. ಸೂಕ್ತ ಸಮಯಕ್ಕೆ ವೈದ್ಯರ ಸಲಹೆಯನ್ನು ಪಡೆದು ಕಣ್ಣಿನ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದರು.

ರೋಟರಿ ಕ್ಲಬ್ ಬಂಟ್ವಾಳ ಇದರ ಅಧ್ಯಕ್ಷರು , ಬಾಲವಿಕಾಸ ಟ್ರಸ್ಟ್ ನ ಸದಸ್ಯರಾದ ಪುಷ್ಪರಾಜ್ ಹೆಗ್ಡೆ ರವರು ಮಾತನಾಡಿ ರೋಟರಿ ಕ್ಲಬ್ ಬಂಟ್ವಾಳ ಇದರ ವತಿಯಿಂದ ಕಣ್ಣಿನ ಸಮಸ್ಯೆ ಇರುವ ಶಿಬಿರಾರ್ಥಿಗಳಿಗೆ ಚಿಕಿತ್ಸೆಗೆ ಬೇಕಾದ ಅಗತ್ಯ ಕ್ರಮ ಹಾಗೂ ಕನ್ನಡಕಗಳನ್ನು ಉಚಿತವಾಗಿ ನೀಡುವ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದರು. ಬಂಟ್ವಾಳ ಆರೋಗ್ಯಿಲಾಖೆಯ ನೇತ್ರಾಧಿಕಾರಿ ಶಾಂತರಾಜ್ ರವರು ಕಣ್ಣಿನ ಆರೋಗ್ಯದ ಮಹತ್ವವನ್ನು ಹೇಳಿದರು.

ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾಕ್ಟರ್ ಶಶಿಕಲಾ ರವರು ಕಣ್ಣಿನ ಆರೋಗ್ಯದ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ನೇತ್ರ ಚಿಕಿತ್ಸಾಲಯದ ಸಹಾಯಕಿ ಕಾವ್ಯಶ್ರೀ ಮಿದಲಾದವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಆಡಳಿತ ಅಧಿಕಾರಿ ರವೀಂದ್ರ ಡಿ. ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿ ವಂದಿಸಿದರು. ಸಹಶಿಕ್ಷಕಿ ಯಜ್ಞೇಶ್ವರಿ ಎಸ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here