ಹಾರಾಡಿ ಶಾಲೆಯಲ್ಲಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಗೆ ಚಾಲನೆ

0

ಪುತ್ತೂರು : ಹಾರಾಡಿ ಶಾಲೆಯಲ್ಲಿ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯ ತಾಲೂಕು ಮಟ್ಟದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಪೌಷ್ಟಿಕ ಆಹಾರವಾದ ಮೊಟ್ಟೆಯನ್ನು ಸಾಂಕೇತಿಕವಾಗಿ ಶಾಲೆಯ ಮುಖ್ಯ ಗುರು ಕೆ.ಕೆ. ಮಾಸ್ತರ್‌ರವರಿಗೆ ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣ ನಾಯ್ಕರವರಿಗೆ ಶಾಸಕರಾದ ಸಂಜೀವ ಮಠಂದೂರುರವರು ಹಸ್ತಾಂತರಿಸಿ ಅಧಿಕೃತವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಬೇಯಿಸಿದ ಮೊಟ್ಟೆ, ಚಿಕ್ಕಿ ಮತ್ತು ಬಾಳೆಹಣ್ಣು ವಿತರಿಸಲಾಯಿತು.


ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ನಗರಸಭಾ ಸದಸ್ಯೆ ಪ್ರೇಮಲತಾ ಜಿ. ನಂದಿಲ, ಮಂಗಳೂರು ಡಯಟ್ ಪ್ರಾಂಶುಪಾಲೆ ರಾಜಲಕ್ಷ್ಮಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಪುತ್ತೂರು ತಾಲೂಕು ಅಕ್ಷರ ದಾಸೋಹ ನಿರ್ದೇಶಕ ವಿಷ್ಣುಪ್ರಸಾದ್, ದೈಹಿಕ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಎಸ್.ಡಿ.ಎಂ.ಸಿ. ಅಧ್ಯಕ್ಷ ಕೃಷ್ಣ ನಾಯ್ಕ, ಉಪಾಧ್ಯಕ್ಷೆ ಫಝೀಲಾ, ಶಾಲಾ ಮುಖ್ಯ ಗುರು ಕೆ.ಕೆ. ಮಾಸ್ತರ್, ಸ್ಥಳೀಯರಾದ ರಾಮ್‌ದಾಸ್ ಉಪಸ್ಥಿತರಿದ್ದರು. ಶಾಲಾ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here