ಪುತ್ತೂರು: ಕಡಬ ತಾಲೂಕಿನಿಂದ ಪುತ್ತೂರು ತಾಲೂಕಿಗೆ ವರ್ಗಾವಣೆಗೊಂಡಿರುವ ಗ್ರಾಮ ಪಂಚಾಯತ್ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಯವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಜು.26ರಂದು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕೊಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಮಿತಾ, ಐತ್ತೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ರಮೇಶ್ ಆಚಾರ್ಯ ಮತ್ತು ಕೌಕ್ರಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸತೀಶ್ ಬಂಗೇರ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಇವರ ಅದ್ಯಕ್ಷತೆಯಲ್ಲಿ ನಡೆಸಲಾಯಿತು. ವೇದಿಕೆಯಲ್ಲಿ ಸಹಾಯಕ ನಿರ್ದೇಶಕಾರದ ಚೆನ್ನಪ್ಪ ಗೌಡ, ಆರ್.ಡಿ.ಪಿ.ಆರ್. ನೌಕರರ ಸಂಘದ ಕಡಬ ಶಾಖೆಯ ತಾಲೂಕು ಅಧ್ಯಕ್ಷ ಜೆರಾಲ್ಡ್ ಮಸ್ಕರೇನಸ್, ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ. ಅಧಿಕಾರಿಗಳು, ಕಾರ್ಯದರ್ಶಿಗಳು, ನರೇಗಾ ಸಿಬ್ಬಂದಿಗಳು, ಗ್ರಾ.ಪಂ, ಮತ್ತು ತಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.