ಬೆಳ್ಳಾರೆಯಲ್ಲಿ ಸಂಸದ ನಳಿನ್ ಕುಮಾರ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದ ಕಾರ್ಯಕರ್ತರು

0

ಪುತ್ತೂರು: ಬರ್ಬರವಾಗಿ ಕೊಲೆಗೀಡಾಗಿರುವ ಬಿಜೆಪಿ ಯುವಮೋರ್ಛಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಮೃತದೇಹದ ಅಂತಿಮ ದರ್ಶನದ ವೇಳೆ ಬೆಳ್ಳಾರೆ ಜಂಕ್ಷನಿಗೆ ಆಗಮಿಸಿದ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಧಿಕ್ಕಾರ ಕೂಗಿದ ಘಟನೆ ನಡೆಯಿತು.‌

ಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಬಂದಿಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಳಿನ್‌ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದರು. ಸಾವಿರಾರು ಕಾರ್ಯಕರ್ತರು ಸಂಸದರು, ಸಚಿವರು ಮತ್ತು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು‌.

LEAVE A REPLY

Please enter your comment!
Please enter your name here