ದ.ಕ.ಜಿಲ್ಲಾ ಬಿಜೆಪಿ ಯುವಮುಂದಾಳು‌ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ

0
  • ಚಿಕ್ಕಮಗಳೂರು ಜಿಲ್ಲಾ ಯುವಮೋರ್ಛಾ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ

ಪುತ್ತೂರು: ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26ರಂದು ರಾತ್ರಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಛಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವಮೋರ್ಛಾ ಪ್ರಮುಖರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.‌ ನಮ್ಮದೇ ಸರಕಾರ ಅಧಿಕಾರದಲ್ಲಿದ್ದರೂ ನಮಗೇ ರಕ್ಷಣೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಯುವಮೋರ್ಛಾಗಳ ಪದಾಧಿಕಾರಿಗಳು‌ ಪಕ್ಷದ ಪ್ರಮುಖರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ವಿಚಾರ ದಕ್ಷಿಣ ಕನ್ನಡ ಬಿಜೆಪಿಯಲ್ಲಿಯೂ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

LEAVE A REPLY

Please enter your comment!
Please enter your name here