ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ.. ಓರ್ವ ಆರೋಪಿ ಸೆರೆ ವದಂತಿ – ಯಾರನ್ನೂ ಬಂಧಿಸಿಲ್ಲ‌.. ಪೊಲೀಸರ ಸ್ಪಷ್ಟನೆ

0

ಪುತ್ತೂರು: ಜು.26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವನಾಯಕ ಪ್ರವೀಣ್‌ ನೆಟ್ಟಾರು ರವರ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವುದಾಗಿ ಸುದ್ದಿ ಹರಡಿದೆ. ಘಟನೆಗೆ ಸಂಬಂಧಿಸಿ ಬೆಳ್ಳಾರೆ ಬೂಡು ನಿವಾಸಿಯೊಬ್ಬರನ್ನು ಬಂಧಿಸಿರುವುದಾಗಿ ವದಂತಿಯಾಗಿದೆ. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದಾರೆ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 12 ಮಂದಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಹೊರತು ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಆರೋಪಿಗಳ ಕುರಿತು ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದ್ದು ಅದರ ಜಾಡು ಹಿಡಿದು ತನಿಖೆಯನ್ನುತೀವ್ರಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. 

LEAVE A REPLY

Please enter your comment!
Please enter your name here