ಪ್ರವೀಣ್ ನೆಟ್ಟಾರು ಹತ್ಯೆ ಆಪಾದಿತ ಆರೋಪಿಗಳಿಗೆ 14 ದಿನದ ನ್ಯಾಯಾಂಗ ಬಂಧನ -ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬೆಳ್ಳಾರೆ ಪೊಲೀಸರು

0

ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರ ಪೈಕೆ ಬಂಧಿತ ಆರೋಪಿಗಳಿಬ್ಬರನ್ನು ಬೆಳ್ಳಾರೆ ಪೊಲೀಸರು ಜು.28 ರಂದು ಸಂಜೆ ಗಂಟೆ 6.00 ಕ್ಕೆ ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾದೀಶರಾದ ಗೌಡ ಆರ್.ಪಿ ಅವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ನೀಡಿದ್ದಾರೆ.

ಸಂಜೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಆರೋಪಿಗಳ ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಪುತ್ತೂರು ನ್ಯಾಯಾಲಯಕ್ಕೆ ಆರೊಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶ ಗೌಡ ಆರ್ ಪಿ ಅವರು ಅಪಾದಿತ ಆರೋಪಿಗಳು ಕೊಲೆ ಕೃತ್ಯ ಎಸಗಿದ ಪ್ರಮುಖ ಆರೋಪಿಗಳಿಗೆ ಸಹಕಾರ ನೀಡಿದ ವಿಚಾರದಲ್ಲಿ ಆ.11 ರ ತನಕ  ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆ ಎಸ್.ಐ ರುಕ್ಮ ನಾಯ್ಕ್ ಮತ್ತು ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಆ11 ರ ಬಳಿಕ ಮತ್ತೆ ಆರೋಪಿಗಳ ವಿಚಾರಣೆ ನಡೆಯಲಿದೆ.

LEAVE A REPLY

Please enter your comment!
Please enter your name here