ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಸೂಕ್ತ ತನಿಖೆ ಮಾಡಬೇಕು, ಕರಾವಳಿಯಲ್ಲಿ ರಾಷ್ಟ್ರೀಯ ತನಿಖಾ ದಳ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮನವಿ

0

ಪುತ್ತೂರು: ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಹಿಂದೆ ಎಸ್ ಡಿ ಐ ಮತ್ತು ಪಿ ಎಫ್ ಐ ಸಂಘಟನೆಗಳು ಸಕ್ರಿಯವಾಗಿದ್ದು ಶಿವಮೊಗ್ಗ ಹರ್ಷ ಹತ್ಯೆ, ಹಿಂದೂ ಯುವಕರ ಕೊಲೆಯತ್ನ ಪ್ರಕರಣಗಳ ಹಿಂದೆ ಈ ಎಲ್ಲಾ ಕ್ರಿಮಿನಲ್ ಚಟುವಟಿಕೆಗಳು ಪೂರ್ವ ನಿಯೋಜಿತವಾಗಿದ್ದು, ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾದಳ, ಅಥವಾ ವಿಶೇಷ ತನಿಖಾ ದಳದ ಮುಖಾಂತರ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮುಖ್ಯ ಮಂತ್ರಿಗೆ ಮನವಿ ಮಾಡಲಾಗಿದೆ.
ನೈಜ ಆರೋಪಿಗಳು ಹಾಗೂ ಆರೋಪಿಗಳಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತ್ತಡ್ಕ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here