ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂರನೇ ಆರೋಪಿ ವಶಕ್ಕೆ..?

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬವರನ್ನು  ವಶಕ್ಕೆ ಪಡೆದಿದ್ದಾರೆ. ಕಾಣಿಯೂರಿನಲ್ಲಿ ವಶಪಡಿಸಿಕೊಂಡ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಈ ಕುರಿತು  ದ.ಕ ಜಿಲ್ಲಾ ಎಸ್ಪಿ ಅವರು   ಮೂರನೇ  ಆರೋಪಿಯನ್ನು ಬಂಧಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾರೆಯ ಶಫೀಕ್‌ (27) ಮತ್ತು ಸವಣೂರಿನ ಝಾಕೀರ್‌ (29) ಬಂಧಿತರು. ಈ ಪೈಕಿ ಓರ್ವನನ್ನು ಕೇರಳದಲ್ಲಿ ವಶಕ್ಕೆ ಪಡೆಯಲಾಗಿದ್ದು, ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.