ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಯೂರಿನಲ್ಲಿ ವಶಪಡಿಸಿಕೊಂಡ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಈ ಕುರಿತು ದ.ಕ ಜಿಲ್ಲಾ ಎಸ್ಪಿ ಅವರು ಮೂರನೇ ಆರೋಪಿಯನ್ನು ಬಂಧಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾರೆಯ ಶಫೀಕ್ (27) ಮತ್ತು ಸವಣೂರಿನ ಝಾಕೀರ್ (29) ಬಂಧಿತರು. ಈ ಪೈಕಿ ಓರ್ವನನ್ನು ಕೇರಳದಲ್ಲಿ ವಶಕ್ಕೆ ಪಡೆಯಲಾಗಿದ್ದು, ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.