ಬಿಳಿನೆಲೆ ಬೈಲು ಶಾಲೆಯಲ್ಲಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ವನಮಹೋತ್ಸವ

0

 

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ದಕ್ಷಿಣ ಕನ್ನಡ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಹಾಗೂ ಬಿಳಿನೆಲೆ ಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಬಿಳಿನೆಲೆ ಬೈಲು ಶಾಲಾ ಆವರಣದಲ್ಲಿ ಲಕ್ಷ್ಮಣ ಫಲ ಗಿಡವನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.


ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ಫಾ. ಬಿನೋಯಿ ಏ.ಜೆ.ರವರು ಉದ್ಘಾಟಿಸಿ ಮಾತನಾಡಿ, ಪ್ರಕೃತಿಯು ದೇವರು ನೀಡಿದ ವರದಾನ, ಸ್ವಾರ್ಥತೆಯ ಸಂಕುಚಿತ ಮನೋಭಾವವನ್ನು ತೊರೆದು ನಿಸ್ವಾರ್ಥತೆಯ ನೂತನ ಶೈಲಿಯನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿ, ವನಮಹೋತ್ಸವದ ಅಗತ್ಯತೆಯ ಕುರಿತು ಅರಿವು ಮೂಡಿಸಿದರು. ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಶಂಕರ್‌ರವರು ಡಿಕೆಆರ್‌ಡಿಎಸ್ ಸಂಸ್ಥೆಯ ಮೂಲಕ ಮಾಡುತ್ತಿರುವ ವಿವಿಧ ರೀತಿಯ ಸಮಾಜಮುಖಿ ಕಾರ್ಯಕ್ರಮಗಳಿಗೆ ಅಭಿನಂದನೆ ಸಲ್ಲಿಸಿದರು.

ಮುಖ್ಯೋಪಾಧ್ಯಾಯಿನಿ ಸುಮತಿ ಸ್ವಾಗತಿಸಿ, ಎಸ್.ಡಿ.ಎಮ್.ಸಿ ಅಧ್ಯಕ್ಷ ವಿನೀಶ್ ಕುಮಾರ್ ವಂದಿಸಿದರು. ರಜನಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ತದ ನಂತರ ಶಾಲಾ ವಠಾರದಲ್ಲಿ ಸಾಂಕೇತಿಕವಾಗಿ ಗಿಡವನ್ನು ನೆಟ್ಟು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಲಕ್ಷ್ಮಣಫಲ ಗಿಡವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಳಿನೆಲೆ ಗ್ರಾ.ಪಂ.ಸದಸ್ಯ ಸತೀಶ್ ಕೆ, ಎಸ್‌ಡಿಎಮ್‌ಸಿ ಉಪಾಧ್ಯಕ್ಷೆ ಜಯಲಕ್ಷ್ಮಿ, ಸಂಸ್ಥೆಯ ಕಾರ್ಯಕರ್ತೆ ಸುಶೀಲಾ, ಕಿರಣ್ ಮಹಿಳಾ ತಾಲೂಕು ಒಕ್ಕೂಟದ ಪ್ರತಿನಿಧಿ ಸಂಧ್ಯಾ ಪತ್ರೋಸ್, ಮಹಾ ಸಂಘದ ಪದಾಧಿಕಾರಿಗಳಾದ ಸ್ವಪ್ನ, ಜಮೀಲಾ, ಶಾಲೆಯ ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.

 

LEAVE A REPLY

Please enter your comment!
Please enter your name here