ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಪುತ್ತೂರು ಹಾಗೂ ಒಳಮೊಗ್ರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಒಳಮೊಗ್ರು ಗ್ರಾಮದ ಕೈಕಾರದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನಿರ್ಮಿಸಿದ ಸ್ವಚ್ಛ ಸಂಕೀರ್ಣದ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ರ ಸೆಕ್ಷನ್ 144 ರ ಪ್ರಕಾರ ನಿಷೇಧಾಜ್ಞೆ ಇರುವುದರಿಂದ ಮತ್ತು ಗ್ರಾಮ ಪಂಚಾಯತ್ ನಿರ್ಣಯದಂತೆ ಜು.29 ರಂದು ನಡೆಯಬೇಕಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷೆ ಸುಂದರಿ, ಕಾರ್ಯದರ್ಶಿ ಜಯಂತಿ ಕೆ ಹಾಗು ಗ್ರಾಪಂನ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.