ಕಾಣಿಯೂರು: ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಚಂದ್ರಾವತಿ ಅಬಿಕಾರ ಅವರು ಜು. 31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. 1986ರಲ್ಲಿ ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ಕರ್ತವ್ಯಕ್ಕೆ ಹಾಜರಾದ ಇವರು ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 1993ರಲ್ಲಿ ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಿರಿಯ ಆರೋಗ್ಯ ಸಹಾಯಕಿಯಾಗಿ ಕರ್ತವ್ಯಕ್ಕೆ ಹಾಜರಾದರು.