ಜು.30: ಆಲಂಕಾರು ಸಿ.ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ರೈ ಮನವಳಿಕೆ  ಸೇವಾ ನಿವೃತ್ತಿ

0

ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪ್ರಶಾಂತ ರೈ ಮನವಳಿಕೆಯವರು ಜು.30 ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ.

ಪ್ರಶಾಂತ ರೈ ಯವರು ಮನವಳಿಕೆ ದಿ.ನಾರಾಯಣ ರೈ ಹಾಗು ಕುಸುಮ ರೈ ದಂಪತಿ ಮಗನಾಗಿ ಮನವಳಿಕೆಯಲ್ಲಿ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪೆರಾಬೆ ಹಾಗು ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಡೆದು ನಂತರ ಪ್ರೌಡ ಶಿಕ್ಷಣವನ್ನು ರಾಮಕುಂಜೇಶ್ವರ ವಿದ್ಯಾ ಸಂಸ್ಥೆ ಯಲ್ಲಿ ಪಡೆದರು. ವಿವೇಕಾನಂದ ಪದವಿ ಕಾಲೇಜು ಪುತ್ತೂರಿನಲ್ಲಿ ಪದವಿ ಶಿಕ್ಷಣ ಪಡೆದು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 1983 ರಲ್ಲಿ ಗುಮಸ್ತನಾಗಿ ಸೇವೆ ಪ್ರಾರಂಭಿಸಿದರು. ಆನಂತರ 2014 ರಲ್ಲಿ ಶಾಖಾ ವ್ಯವಸ್ಥಾಪಕರಾಗಿ ಮುಂಭಡ್ತಿ ಪಡೆದು ಕೊಯಿಲ ಶಾಖಾ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ 2019 ರಲ್ಲಿ ಸಂಘದ ಪ್ರದಾನ ಕಛೇರಿಯಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಜು.30 ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here