`ಆ.13-15:ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ’ ರಾಜ್ಯ ಸರಕಾರಿ ನೌಕರರಿಗೆ ಸಿಎಸ್ ವಂದಿತಾ ಶರ್ಮ ಕರೆ

0

ಬೆಂಗಳೂರು:ಆಗಸ್ಟ್ 13ರಿಂದ 15ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.
ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿ, ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಇಡೀ ದೇಶಕ್ಕೆ ಮಾದರಿಯಾಗಲು ರಾಜ್ಯ ಸರ್ಕಾರಿ ನೌಕರರಿಗೆ ಇದೊಂದು ಸದಾವಕಾಶ ಎಂದು ಹೇಳಿದರು.
ರಾಷ್ಟ್ರದೆಲ್ಲೆಡೆಯಂತೆ, ರಾಜ್ಯದಲ್ಲಿಯೂ ಆಗಸ್ಟ್ 13ರಿಂದ 15ರವರೆಗೆ ಹರ್ ಘರ್ ತಿರಂಗಾ ಅಂದರೆ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವನ್ನು ಆಯೋಜಿಸಲಾಗಿದೆ. ಭಾರತ ಸ್ವಾತ್ರಂತ್ಯ ಅಮೃತ ಮಹೋತ್ಸವದ ಸಂಸ್ಮರಣೆಯಲ್ಲಿ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ ಮೂರು ದಿನಗಳ ಕಾಲ ಇಡೀ ರಾಷ್ಟ್ರದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.ಅದರಂತೆ ಈ ಅಭಿಯಾನಕ್ಕೆ ಕರ್ನಾಟದಲ್ಲೂ ಪೂರ್ಣ ಪ್ರಮಾಣದ ಸ್ಪಂದನೆ ದೊರೆಯಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದೆ ಎಂದವರು ಹೇಳಿದರು.ರಾಜ್ಯದಲ್ಲಿ ಒಂದು ಕೋಟಿ ಧ್ವಜಾರೋಹಣ ಮಾಡುವ ಗುರಿ ಹೊಂದಿದ್ದು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದ ಅವರು ಜನರೂ ಧ್ವಜವನ್ನು ಹಾರಿಸಬಹುದು, ಸೆಲ್ಫಿ ತೆಗೆದುಕೊಳ್ಳಬಹುದು ಮತ್ತು ಅದನ್ನು  eಠಿಠಿm://eZಜeZಠ್ಟಿZಜ.ಟಞ  ನಲ್ಲಿ ಅಪ್‌ಲೋಡ್ ಮಾಡಬಹುದಾಗಿದೆ ಎಂದು ಹೇಳಿದರು. 

LEAVE A REPLY

Please enter your comment!
Please enter your name here