ಕಾವು ಶಾಲೆ ಮುಖ್ಯಗುರು ಸೇವಾ ನಿವೃತ್ತಿ -ಆ. 1ರಂದು ಶಾಲೆಯಲ್ಲಿ ವಿದಾಯಕೂಟ ಸಮಾರಂಭ

0

ಪುತ್ತೂರು: ಕಾವು ದಕ.ಜಿಪಂ.ಮಾ. ಉಪ್ರಾಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ಸೇವೆಯಲ್ಲಿದ್ದ ಹುಕ್ರಪ್ಪ ನಾಯ್ಕ ಬಿ ಅವರು ಜು. 31 ರಂದು ಸೇವೆಯಿಂದ ನಿವೃತ್ತಿಯಾಗಿದ್ದು ಅವರಿಗೆ ವಿದಾಯಕೂಟ ಸಮಾರಂಭವು ಆ. 1 ರಂದು ಶಾಲಾ ವಠಾರದಲ್ಲಿ ನಡೆಯಲಿದೆ.

 


ಸಭಾ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಅರಿಯಡ್ಕ ಗ್ರಾಪಂ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯರವರು ಅಧ್ಯಕ್ಷತೆ ವಹಿಸಲಿದ್ದಾರೆ.ಪುತ್ತೂರು ಶ್ರೀರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿಯವರು ಅಭಿನಂದನಾ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪುತ್ತೂರು ಕ್ಷೆತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್, ಮಾಜಿ ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನನ್ಯ ಅಚ್ಚುತ್ತ ಮೂಡೆತ್ತಾಯ, ಗ್ರಾಪಂ ಸದಸ್ಯರುಗಳಾದ ದಿವ್ಯನಾಥ ಶೆಟ್ಟಿ ಕಾವು,ಅಬ್ದುಲ್ ರಹಿಮಾನ್, ಪ್ರವೀಣ, ಸಲ್ಮಾ, ಕಾವು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಶೇಖರ್ ರಾವ್, ಮಾಡನ್ನೂರು ನೂರುಲ್‌ಹುದಾ ಅಕಾಡೆಮಿ ಅಧ್ಯಕ್ಷ ಇಸ್ಮಾಯಿಲ್, ಕಾವು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಕೊಚ್ಚಿ, ಕಾವು ಲಯನ್ಸ್ ಕ್ಲಬ್ ಅಧ್ಯಕ್ಷ ಪಾವನರಾಮ, ಸಿಆರ್‌ಪಿ ಜಯಂತಿ ರವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಿವೃತ್ತಿಯಾಗಲಿರುವ ಅಕ್ಷರದಾಸೋಹ ಸಿಬಂದಿಗಳಾದ ಸರಸ್ವತಿ ಮತ್ತು ಲೀಲಾವತಿಯವರಿಗೂ ಗೌರವಾರ್ಪಣೆ ನಡೆಯಲಿದೆ.

ಸಭಾ ಕಾರ್ಯಕ್ರಮದ ಬಳಿಕ ಕಾರ್ಕಳ ಜೇಸಿಸ್ ಆಂಗ್ಲ ಮಾಧ್ಯಮ ಶಿಕ್ಷಕಿ ವಂದನಾ ರೈ ಅವರಿಂದ ಪೋಷಕರಿಗೆ ಹಾಗೂ ಮಕ್ಕಳಿಗೆ ವಿಶೇಷ ಉಪನ್ಯಾಸ ನಡೆಯಲಿದೆ. ಕಾರ್ಯಕ್ರಮದ ಬಳಿಕ ಭೋಜನದ ವ್ಯವಸ್ಥೆ ಇದೆ.

LEAVE A REPLY

Please enter your comment!
Please enter your name here