ಫಲಾಪೇಕ್ಷೆ ಇಲ್ಲದೆ ಸಮಾಜದ ಸೇವೆ ಮಾಡಿದರೆ ಜೀವನ ಸಾರ್ಥಕ : ಪುಂಡಲೀಕ ಮರಾಠೆ

0

ಪುತ್ತೂರು: ರಾಜಾಪುರ ಸಾರಸ್ವತ ಸಮಾಜ ಸೇವಾ ಸಂಘ ಪೈವಳಿಕೆ ಇದರ ಆಶ್ರಯದಲ್ಲಿ ನಡೆದ ಶ್ರೀ ಸತ್ಯ ನಾರಾಯಣ ಪೂಜಾ ಕಾರ್ಯಕ್ರಮದ ಭಾಗವಾಗಿ ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜಸೇವಾ ಸಂಘ ಪುತ್ತೂರು ಇದರ ಶತಮಾನೋತ್ಸವದ ಅಂಗವಾಗಿ ವನಮಹೋತ್ಸವ ಮತ್ತು ಸನ್ಮಾನ ಕಾರ್ಯಕ್ರಮ ಮೊಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷ ಪುಂಡಲೀಕ ಮರಾಠೆಯವರು ಧಾರ್ಮಿಕ ಉಪನ್ಯಾಸ ನೀಡುತ್ತಾ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸಮಾಜಸೇವೆಯಲ್ಲಿ ತೊಡಗಿಕೊಂಡಾಗ ಮಾತ್ರ ಜೀವನ ಸಾರ್ಥಕ ವಾಗುವುದು ಎಂದು ನುಡಿದರು. ದುರ್ಗಾಪರಮೇಶ್ವರಿ ದೇವಸ್ಥಾನ ಮೊಗೇರು ಇದರ ಆಡಳಿತ ಮೊಕ್ತೇಸರ ಆಲ್ಚಾರು ರಾಮಚಂದ್ರ ನಾಯಕ್ ಕಾರ್ಯಕ್ರಮ‌ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ರಾಜಪುರ ಸಾರಸ್ವತ ಸಮಾಜ ಸೇವಾ ಸಂಘದ ಅಧ್ಯಕ್ಷ ಮನೋಹರ ನಾಯಕ್ ಕಂಪದಮೂಲೆ, ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜಸೇವಾ ಸಂಘ ಪುತ್ತೂರು ಇದರ ಅದ್ಯಕ್ಷ ಬಿ.ಆರ್ ಶುಭಾಕರ ರಾವ್, ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪುಂಡಿಕಾಯಿ ಉಪಸ್ಥಿತರಿದ್ದರು. ಶಂಕರ ಕಾಮತ್ ಚೇವಾರು ಸ್ವಾಗತಿಸಿ, ಬಾಲಕೃಷ್ಣ ನಾಯಕ್ ತೆಂಕಿಲ ವಂದಿಸಿದರು. ಮಲ್ಲಿಕಾ ಕುಕ್ಕಾಡಿ ಕಾರ್ಯಕ್ರಮ ನಿರ್ವಹಿಸಿದರು.

ಸನ್ಮಾನ ಕಾರ್ಯಕ್ರಮ : ಸಾಮಾಜಿಕ‌, ಶೈಕ್ಷಣಿಕ ಸೇವೆಯನ್ನು ಗುರುತಿಸಿ ಕಾಪು ತಾಲೂಕು‌ ಕನ್ನಡ ಸಾಹಿತ್ಯ ಪರಿಷತ್ತಿನ‌ ಅಧ್ಯಕ್ಷ ಪುಂಡಲೀಕ ಮರಾಠೆ, ನಿವೃತ್ತ ಶಿಕ್ಷಕಿ  ‌ಶಾರದಾ ವೈ ಶೇಣಿ ತೋಟದಮೂಲೆ, ಶಿಕ್ಷಕಿ ವಾರಿಜಾ ಎಂ ನೇರೋಳು ಇವರುಗಳಿಗೆ ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇದರ ಶತಮಾನೋತ್ಸವದ ಸವಿನೆನಪಿಗಾಗಿ ಸನ್ಮಾನಿಸಿ ಗೌರವಿಸಲಾಯಿತು.

ವನಮಹೋತ್ಸವ :

ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಪುತ್ತೂರು ಇದರ ಶತಮಾನೋತ್ಸವದ ಸವಿನೆನಪಿಗಾಗಿ ಔಷದೀಯ ಗಿಡಗಳನ್ನು ದೇವಸ್ಥಾನದ ಆವರಣದಲ್ಲಿ ನೆಡುವ ಮೂಲಕ ಪರಿಸರ ಕಾಳಜಿಯ ಬಗ್ಗೆ ಅರಿವು ಮೂಡಿಸಲಾಯಿತು.

LEAVE A REPLY

Please enter your comment!
Please enter your name here